ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿವೇಶನ ಮಂಜೂರಿಗೆ ಆಗ್ರಹಿಸಿ ಧರಣಿ

Last Updated 18 ನವೆಂಬರ್ 2019, 12:11 IST
ಅಕ್ಷರ ಗಾತ್ರ

ರಾಯಚೂರು: ಕೊಳೆಗೇರಿ ಪ್ರದೇಶದಲ್ಲಿ ವಾಸಿಸುತ್ತಿರುವ ಕಟ್ಟಡ ಕಾರ್ಮಿಕರಿಗೆ ನಿವೇಶನಗಳು ಮಂಜೂರು ಮಾಡುವಂತೆ ಆಗ್ರಹಿಸಿ ಕರ್ನಾಟಕ ಪ್ರಗತಿಪರ ಕಟ್ಟಡ ಕಾರ್ಮಿಕರ ಜಿಲ್ಲಾ ಸಂಘದ ಸದಸ್ಯರು ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ಟಿಪ್ಪುಸುಲ್ತಾನ ಉದ್ಯಾನವನದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ರಾಯಚೂರು ನಗರದ ತಿಮ್ಮಾಪುರು ಪೇಟೆ, ಖಾದರಗುಂಡ ಜೆ.ಡಿ ತೋಟ ಮತ್ತು ಕೊತ್ತಪೇಟೆ ಕೊಳಗೇರಿ ಪ್ರದೇಶಗಳಲ್ಲಿ ವಾಸಿಸುತ್ತಿರುವ ನಿವೇಶನ ರಹಿತ ಕಾರ್ಮಿಕರಿಗೆ ರಾಯಚೂರು ನಗರ ವ್ಯಾಪ್ತಿಯಲ್ಲಿ ಬರುವ ಸರ್ವೆ ಸಂಖ್ಯೆ 928 ವಿಸ್ತೀರ್ಣ 67–19 ಗುಂಟೆ ಗೈರಾಣಿ ಭೂಮಿ ಇದ್ದು, ಇದರಲ್ಲಿ ಹತ್ತು ಎಕರೆ ನಿವೇಶನ ರಹಿತರಿಗೆ ನಿವೇಶನ ಮಂಜೂರು ಮಾಡುವಂತೆ ಧರಣಿಯಲ್ಲಿ ಒತ್ತಾಯಿಸಿದರು.

ರಂಗಪ್ಪ ಅಸ್ಕಿಹಾಳ, ತಿಮ್ಮಪ್ಪ ಕಡಗೋಳ, ಬಿ.ಆರ್. ಸುಧಾನಂದ, ಅಮರೇಶ, ಹನುಮೇಶ, ಬಸವರಾಜ ಗಾರಲದಿನ್ನಿ, ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT