ಮಂಗಳವಾರ, ಅಕ್ಟೋಬರ್ 27, 2020
22 °C

ರಾಯಚೂರು: ಮಸೀದಿಪುರ ಗ್ರಾಮ ಸ್ಥಳಾಂತರಕ್ಕೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಗಬ್ಬೂರು ಹೋಬಳಿಯ ಮಸೀದಿಪುರ ಗ್ರಾಮವನ್ನು ಸ್ಥಳಾಂತರ ಮಾಡಬೇಕು ಎಂದು ಒತ್ತಾಯಿಸಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ದೇವದುರ್ಗ ತಾಲ್ಲೂಕು ಸಮಿತಿಯ ನೇತೃತ್ವದಲ್ಲಿ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.

ಪ್ರತಿವರ್ಷ ಮಳೆಗಾಲದಲ್ಲಿ ಮಸೀದಿಪುರ ಗ್ರಾಮ ಸಂಪೂರ್ಣ ಜಲಾವೃತವಾಗಿ ಜನಸಾಮಾನ್ಯರು ಜೀವ ಭಯದಲ್ಲಿ ಬದುಕುವಂತಾಗಿದೆ. 2008–09ರಲ್ಲಿ ನೆರೆಹಾವಳಿ ಬಂದಾಗ ಅನೇಕ ಸಾವು–ನೋವು ಸಂಭವಿಸಿತ್ತು. ಪ್ರಸ್ತುತ ಮಳೆಗಾಲದಲ್ಲಿಯೂ ಗ್ರಾಮ ಜಲಾವೃತವಾಗಿ ಗ್ರಾಮದ ಬಹುತೇಕ ಮನೆಗಳಲ್ಲಿ ನೀರಿನ ಬುಗ್ಗೆಗಳು ನಿರ್ಮಾಣವಾಗಿ ಅನೇಕ ಮನೆಗಳು ಕುಸಿದಿವೆ ಎಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಪ್ರತಿವರ್ಷ ಮಳೆಗಾಲದಲ್ಲಿ ಪರಿಸ್ಥಿತಿ ಹದಗೆಡುತ್ತಿದ್ದರೂ ಅಧಿಕಾರಿಗಳು ಕೇವಲ ವೀಕ್ಷಣೆ ಮಾಡಿ ಹೋಗುತ್ತಾರೆ ವಿನಾ ಪರಿಹಾರ ಕ್ರಮ ಕೈಗೊಳ್ಳುತ್ತಿಲ್ಲ. ಚುನಾವಣೆ ಸಂದರ್ಭದಲ್ಲಿ ರಾಜಕೀಯ ನಾಯಕರು ಅನೇಕ ಭರವಸೆ ನೀಡುತ್ತಾರೆ. ಸಂಕಷ್ಟದ ಸಂದರ್ಭದಲ್ಲಿ ನೆರವಿಗೆ ಧಾವಿಸುತ್ತಿಲ್ಲ. ಕೂಡಲೇ ಜಿಲ್ಲಾಧಿಕಾರಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮವನ್ನು ಸ್ಥಳಾಂತರ ಮಾಡಬೇಕು. ಇಲ್ಲದೇ ಹೋದಲ್ಲಿ ಕುಟುಂಬ ಸದಸ್ಯರೊಂದಿಗೆ ಜಿಲ್ಲಾಡಳಿತ ಕಚೇರಿ ಮುಂದೆ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.

ಎಂ. ಆರ್. ಭೇರಿ, ಮಾರೆಪ್ಪ ಹೊನ್ನಟಗಿ, ತುಕರಾಮ ಎನ್. ಗಣೇಕಲ್, ಬಸವಲಿಂಗ, ರಂಗನಾಥ, ಮಾರೆಪ್ಪ ಮಲದಕಲ್ ನೇತೃತ್ವ ವಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.