ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು | ಜಿಲ್ಲಾ ಕೇಂದ್ರಗಳಲ್ಲಿ ಮೌಲ್ಯಮಾಪನ ಕೇಂದ್ರ ಸ್ಥಾಪಿಸಲು ಒತ್ತಾಯ

Last Updated 26 ಮೇ 2020, 15:46 IST
ಅಕ್ಷರ ಗಾತ್ರ

ರಾಯಚೂರು: ದ್ವಿತೀಯ ಪಿ.ಯು ಪರೀಕ್ಷೆಯ ಉತ್ತರ ಪತ್ರಿಕೆ ಮೌಲ್ಯಮಾಪನ ಕೇಂದ್ರಗಳನ್ನು ಜಿಲ್ಲಾಮಟ್ಟದಲ್ಲಿ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಅವರ ಮೂಲಕ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದರು.

ಮೌಲ್ಯಮಾಪನಕ್ಕೆ ಸಂಬಂಧಿಸಿದಂತೆ ಸಮಿತಿ ನಿಡಿದ ಮನವಿಗೆ ಸ್ಪಂದಿಸಿ ಜಿಲ್ಲಾ ಮಟ್ಟದಲ್ಲಿ ಮೌಲ್ಯಮಾಪನ ಕೇಂದ್ರಗಳನ್ನು ಪ್ರಾರಂಭಿಸುವುದಾಗಿ ಆಶ್ವಾಸನೆ ನೀಡಿದ್ದಾಯಿತು. ಪ್ರಸ್ತುತ ಕೋವಿಡ್ -19 ಹರಡುತ್ತಿರುವ ಸಂದರ್ಭದಲ್ಲಿ ಜೀವ ಅಂಗೈಯಲ್ಲಿಟ್ಟುಕೊಂಡು ಬದುಕುವ ಪರಿಸ್ಥಿತಿಯಿದೆ. ಇಂತಹ ಸಂದರ್ಭದಲ್ಲಿ ಬೆಂಗಳೂರು , ಬೆಳಗಾವಿ , ಧಾರವಾಡ , ಮಂಗಳೂರು, ಕಲಬುರಗಿ ಮತ್ತಿತರೆ ಕೊರೊನಾ ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಮೌಲ್ಯಮಾಪನ ಕೇಂದ್ರಗಳನ್ನು ಪ್ರಾರಂಭಿಸಲಾಗಿದ್ದು ಉನ್ಯಾಸಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಅಲ್ಲದೇ ಸಮರ್ಪಕವಾದ ಸಾರಿಗೆ ವ್ಯವಸ್ಥೆ, ಊಟ, ವಸತಿ ವ್ಯವಸ್ಥೆ ಇಲ್ಲದಿರುವುದರಿಂದ ಅಪಾಯಯ ಪರಿಸ್ಥಿತಿ ಇದೆ, ಆದ್ದರಿಂದ ಪ್ರಸ್ತುತ -2020 ರ ವರ್ಷದ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮೌಲ್ಯಮಾಪನಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಸಮಿತಿಯ ಜಿಲ್ಲಾಧ್ಯಕ್ಷ ನರಸಪ್ಪ ಭಂಡಾರಿ, ಗೋವರ್ಧನ್ ರೆಡ್ಡಿ, ಶರಣಪ್ಪ ಪಾಟೀಲ್, ಮಂಜುನಾಥ್ ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT