ಬುಧವಾರ, ಆಗಸ್ಟ್ 17, 2022
28 °C

ಪಿಎಸ್‌ಐ ಅಮಾನತುಗೊಳಿಸಲು ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಹೋರಾಟಗಾರರ ಮೇಲೆ ಪ್ರಕರಣ ದಾಖಲಿಸಿರುವ ಪಶ್ಚಿಮ ಪೊಲಿಸ್ ಠಾಣೆಯ ಪಿಎಸ್ ಐ ದಾದಾವಲಿ ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿ ಅಂಬೇಡ್ಕರ್ ಸೇನೆಯ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ನಗರದ ಗಂಜ್ ವೃತ್ತದಿಂದ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿವರೆಗೆ ಶುಕ್ರವಾರ ಪ್ರತಿಭಟನಾ ರ‍್ಯಾಲಿ ನಡೆಸಿದರು.

ಆನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್‌ ನಿಕ್ಕಂ ಅವರಿಗೆ ಮನವಿ ಸಲ್ಲಿಸಿ, ಸಂಘಟನೆಯಿಂದ ಈ ಹಿಂದೆ ಮಾಡಲಾದ ಹೋರಾಟದ ಪ್ರತಿಯಾಗಿ ದಾದಾವಲಿ ಅವರು ಪ್ರತಿಭಟನಾಕಾರರ ಮೇಲೆ ಪ್ರಕರಣ ದಾಖಲಿಸಿ ಹೋರಾಟಗಾರರ ಹಕ್ಕು ಕಸಿದುಕೊಳ್ಳುವ ಧೋರಣೆ ಅನುಸರಿಸುತ್ತಿದ್ದಾರೆ ಎಂದು ದೂರಿದರು.

ಪ್ರತಿ ತಿಂಗಳು 2ನೇ ಭಾನುವಾರ ಪರಿಶಿಷ್ಟ ಸಮುದಾಯದ ಕುಂದು ಕೊರತೆ ಸಭೆ ನಡೆಸಬೇಕಾದರೂ ಇವರೆಗೆ ಒಂದು ಸಭೆ ಮಾಡಿಲ್ಲ. ಅಲ್ಲದೇ ಸರ್ಕಾರಿ ಕಚೇರಿಯಲ್ಲಿ ಮಹಾತ್ಮಾಗಾಂಧಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರ ಹಾಕಬೇಕಿದ್ದರೂ ಇಬ್ಬರ ನಾಯಕರ ಭಾವಚಿತ್ರ ಹಾಕಿಲ್ಲ. ಜನಸ್ನೇಹಿ ಆಡಳಿತ ಮಾಡದ ದಾದಾವಲಿ ಅವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ವಿಶ್ವನಾಥ ಪಟ್ಟಿ, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಬಂದನವಾಜ್, ಕಾರ್ಯದರ್ಶಿ ಈ. ಕುಮಾರಸ್ವಾಮಿ, ಪದಾಧಿಕಾರಿ ಮಹೇಶ ಕುಮಾರ, ಭೀಮೇಶ ಕುರ್ಡಿ, ರವಿಚಂದ್ರ, ಶಿವರಾಜ, ಮಾರಪ್ಪ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು