ಭಾನುವಾರ, ಮೇ 16, 2021
25 °C

ರಾಯಚೂರು: ಎಬಿವಿಪಿ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ದೆಹಲಿಯ ಜೆಎನ್‌ಯು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳು, ಶಿಕ್ಷಕರ ಮೇಲೆ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಗೂಂಡಾಗಿರಿ ಮಾಡಿದ್ದು, ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಎಐಡಿಎಸ್‌ಓ, ಎಸ್‌ಎಫ್‌ಐ, ಕೆವಿಎಸ್ ಸಂಘಟನೆ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.

ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರ ಮೇಲೆ ಹಲ್ಲೆ ಮಾಡಿರುವುದು ಶೋಚನೀಯ. ಎಬಿವಿಪಿ ಕಾರ್ಯಕರ್ತರು ಗೂಂಡಾಗಿರಿ ಮಾಡಿದ್ದು, ಕ್ಯಾಂಪಸ್‌ನಲ್ಲಿ ಶುಲ್ಕ ಹೆಚ್ಚಳ ವಿರೋಧಿಸುವ ವಿದ್ಯಾರ್ಥಿಗಳನ್ನು ಗುರಿಯಾಗಿಟ್ಟುಕೊಂಡು ಕಬ್ಬಿಣದ ರಾಡು ಮತ್ತು ಲಾಠಿಗಳನ್ನು ಹಿಡಿದು ಮನಬಂದಂತೆ ಹೊಡೆದು ಭಯದ ವಾತಾವರಣ ಸೃಷ್ಟಿಸಿದ್ದಾರೆ ಎಂದು ಆರೋಪಿಸಿದರು.

ದಾಳಿಯಲ್ಲಿ ಹಲವು ವಿದ್ಯಾರ್ಥಿನಿಯರಿಗೆ ಗಂಭಿರ ಗಾಯಗಳಾಗಿದ್ದು, ಬಾರಿ ರಕ್ತಸ್ರಾವದ ನಂತರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೂಡಲೇ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಮತ್ತು ಹೆಚ್ಚಳವಾಗುತ್ತಿರುವ ಶುಲ್ಕವನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ಶಿವಕುಮಾರ ಮ್ಯಾಗಳಮನಿ, ಮಹೇಶ್ ಚಿಕಲಪರ್ವಿ, ಲಲ್ಷ್ಮಮಂಡಲಗೇರಿ, ಚನ್ನಬಸವ ಜಾನೇಕಲ, ಮಲ್ಲನಗೌಡ, ಪೀರ್ ಸಾಬ್ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು