ಶುಕ್ರವಾರ, ಜನವರಿ 24, 2020
16 °C

ರೈತರ ಸಾಲಮನ್ನಾ ಮಾಡಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ನೆರೆ ಸಂತ್ರಸ್ತ ರೈತರಿಗೆ ಪರಿಹಾರ ಧನ ವಿತರಿಸಬೇಕು ಹಾಗೂ ರೈತರ ಸಾಲಮನ್ನಾ ಮಾಡಬೇಕು ಎಂದು ಸರ್ವ ಜನಪರ ಸಂಘ ಜಿಲ್ಲಾ ಘಟಕ ಒತ್ತಾಯಿಸಿದೆ.

ಜಿಲ್ಲಾಧಿಕಾರಿ ಕಚೇರಿಯ ಸ್ಥಾನಿಕ ಅಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗೆ ಗುರುವಾರ ಮನವಿ ಸಲ್ಲಿಸಿದ ಅವರು, ಜಿಲ್ಲೆಯಲ್ಲಿ ಕೆಲವು ಭಾಗಗಳಲ್ಲಿ ಅತಿವೃಷ್ಟಿಯಾಗಿದ್ದು; ಇನ್ನು ಕೆಲವೆಡೆ ಮಳೆ ಇಲ್ಲದೆ ಅನಾವೃಷ್ಟಿಯಿಂದ ರೈತರು ನಷ್ಟ ಅನುಭವಿಸುತ್ತಿದ್ದಾರೆ. ನೆರೆ ಸಂತ್ರಸ್ತರಿಗೆ ಸರ್ಕಾರ ಬಿಡುಗಡೆ ಮಾಡಿರುವ ಪರಿಹಾರ ಹಣ ಸಮರ್ಪಕವಾಗಿ ವಿತರಣೆಯಾಗಿಲ್ಲ. ಕೆಲವು ರೈತರಿಗೆ ದೊರೆತರೆ ಇನ್ನು ಕೆಲವು ರೈತರಿಗೆ ಪರಿಹಾರ ಸಿಕ್ಕಿರುವುದಿಲ್ಲ. ಕೂಡಲೇ ಅಧಿಕಾರಿಗಳು ಕೂಲಂಕುಶವಾಗಿ ಪರಿಶೀಲಿಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಕೇಳಿಕೊಳ್ಳಲಾಗಿದೆ.

ರೈತರು ಈಗಾಗಲೇ ಬ್ಯಾಂಕುಗಳಲ್ಲಿ ಇಲ್ಲಿಯವರೆಗೆ ಮಾಡಿರುವ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಿ ರೈತರ ಕಷ್ಟಕ್ಕೆ ಸರ್ಕಾರ ನೆರವಾಗಬೇಕು ಎಂದು ಒತ್ತಾಯಿಸಿದರು. ಸರ್ವ ಜನಪರ ಸಂಘದ ಜಿಲ್ಲಾಧ್ಯಕ್ಷ ಎ.ವಿಜಯರಾಜ, ಪಿ. ಸೂರ್ಯಪ್ರಕಾಶ, ಬೋಳಬಂಡಿ ಇದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು