ಲಿಂಗಸೂಗುರು: ತಾಲ್ಲೂಕಿನ ಕೆಲ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಅಂಗವಿಕಲ ಮಕ್ಕಳಿಗೆ ದಾಖಲಾತಿ ನೀಡಲು ನಿರಾಕರಣೆ ಮಾಡುತ್ತಿದ್ದು ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗವಿಕಲರ ಆರ್ಪಿಡಿ ಟಾಸ್ಕ್ ಫೋರ್ಸ್ ಸಮಿತಿಯ ಸದಸ್ಯರು ಶುಕ್ರವಾರ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಸಿದರು.

ಪ್ರವೇಶ ನೀಡದಿರುವುದು ಅಂಗವಿಕಲರ ಹಕ್ಕುಗಳ ಕಾಯ್ದೆಯ ಉಲ್ಲಂಘನೆಯಾಗಿದೆ. ಶಿಕ್ಷಣ ಇಲಾಖೆಯ ಅಧಿಕಾರಿಗಳು ಈ ಕುರಿತು ಪರಿಶೀಲಿಸಬೇಕು. ತಾಲ್ಲೂಕಿನ ಎಲ್ಲಾ ಸರ್ಕಾರಿ, ಸರ್ಕಾರದಿಂದ ಮಾನ್ಯತೆ ಪಡೆದ ಎಲ್ಲಾ ಶಾಲೆಗಳಲ್ಲಿ ಅಂಗವಿಕಲ ಮಕ್ಕಳಿಗೆ ಪ್ರವೇಶ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಅಂಗವಿಕಲರ ಆರ್ಪಿಡಿ ಟಾಸ್ಕ್ ಫೋರ್ಸ್ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಸುರೇಶ ಪಿ. ಭಂಡಾರಿ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.