ಅಟಲ್ ಬಿಹಾರಿ ವಾಜಪೇಯಿ ಜನ್ಮ ದಿನಾಚರಣೆ

ರಾಯಚೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ದೇಶಪ್ರೇಮ, ಸೇವಾಮನೋಭಾವನೆ, ನಿಸ್ವಾರ್ಥ ಸೇವೆಯನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಡಾ.ಬಿ.ಆರ್. ಅಂಬೇಡ್ಕರ್ ಯುವ ಅಭಿವೃದ್ದಿ ಸಂಘದ ಕಾರ್ಯದರ್ಶಿ ತಿರುಮಲೇಶ ಹೇಳಿದರು.
ನಗರದ ಜಿಲ್ಲಾ ನೆಹರು ಯುವ ಕೇಂದ್ರದಲ್ಲಿ ಭಾರತ ಸೇವಾದಳ ಜಿಲ್ಲಾ ಶಾಖೆ, ಚಾಮುಂಡೇಶ್ವರಿ ಮಹಿಳಾ ಎಸ್.ಎಚ್.ಜಿ,. ವಿ.ಜಿ.ಸಿ. ಟ್ರಸ್ಟ್,. ಡಾ.ಬಿ.ಆರ್. ಅಂಬೇಡ್ಕರ್ ಯುವ ಅಭಿವೃದ್ದಿ ಸಂಘ ಹಾಗೂ ತೃಪ್ತಿ ಮಹಿಳಾ ಮಂಡಳಿ ವತಿಯಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವನ್ನು ಅತ್ಯುತ್ತಮ ಆಡಳಿತ ದಿನವನ್ನಾಗಿ ಆಚರಿಸಲಾಯಿತು.
ತೃಪ್ತಿ ಮಹಿಳಾ ಮಂಡಳಿ ಉಪಾಧ್ಯಕ್ಷೆ ಅಯಾನ್ ಅಲಿ ಮಾತನಾಡಿ, ಸರ್ಕಾರದ ಕೌಶಲ ಯೋಜನೆಗಳು ಮತ್ತು ವ್ಯಕ್ತಿತ್ವ ವಿಕಸನದ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.
ನಾಗರಾಜ, ತಿಮ್ಮಾರೆಡ್ಡಿ, ರೋಹಿತ್, ಈರಣ್ಣ, ವೀರೇಶ, ವೆಂಕಟೇಶ ಇದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.