ರಾಯಚೂರು: ರಾಯಚೂರಿನಲ್ಲಿಯೇ ಏಮ್ಸ್ ಸ್ಥಾಪನೆ ಮಾಡುವಂತೆ ಆಗ್ರಹಿಸಿ ನಗರದ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ರಾಯಚೂರು ಏಮ್ಸ್ ಹೋರಾಟ ಸಮಿತಿಯಿಂದ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಧರಣಿಯಲ್ಲಿ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದರು.
ಏಮ್ಸ್ ಹೋರಾಟ 450 ದಿನಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ, ಎಸ್‌ಕೆಇಎಸ್ ಪ್ಯಾರಾ ಮೆಡಿಕಲ್ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಡಾ.ಬಾಬುರಾವ್ ಶೇಗುಣಸಿ ನೇತೃತ್ವದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ದೇವದುರ್ಗ ತಾಲ್ಲೂಕಿನ ಗಬ್ಬೂರ ಗ್ರಾಮದಿಂದ ದಲಿತ ಸಂಘರ್ಷ ಸಮಿತಿ (ಭೀಮ ವಾದ) ವತಿಯಿಂದ ಸಂಘದ ಅಧ್ಯಕ್ಷ ರಾಜಪ್ಪ ಅವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಬೈಕ್ ರ್‍ಯಾಲಿ ನಡೆಸಿದರು. ಆನಂತರ ಹೋರಾಟದ ವೇದಿಕೆಗೆ ಆಗಮಿಸಿ ಬೆಂಬಲ ವ್ಯಕ್ತಪಡಿಸಿದರು.
ಯಾದಗಿರಿ ಜಿಲ್ಲಾ ಘಟಕದ ಅಧ್ಯಕ್ಷ ವೈಜನಾಥ ಪಾಟೀಲ, ಏಮ್ಸ್ ಹೋರಾಟ ಸಮಿತಿ ಸಂಚಾಲಕ ಬಸವರಾಜ ಕಳಸ, ಅಶೋಕ ಕುಮಾರ ಜೈನ್, ಜಾನ್ ವೆಸ್ಲಿ, ಸಾದೀಕ್ ಖಾನ್, ಡಾ.ಎಸ್.ಎಸ್ ಪಾಟೀಲ, ವೀರಭದ್ರಪ್ಪ ಅಂಬರಪೇಟೆ, ನರಸಪ್ಪ ಬಾಡಿಯಾಲ್, ವೆಂಕಯ್ಯ ಶೆಟ್ಟಿ ಹೊಸಪೇಟೆ, ಎನ್. ಮಹಾವೀರ, ಕಾಮರಾಜ ಪಾಟೀಲ, ವೆಂಕಟರೆಡ್ಡಿ ದಿನ್ನಿ, ಆರಿಫ್ ಮಿಯಾ ನೆಲಹಾಳ್, ಎಂ.ಆರ್.ಬೇರಿ, ಪ್ರಭು ನಾಯಕ, ಜಸವಂತರಾವ್ ಕಲ್ಯಾಣಕಾರಿ, ಜಮಾತೆ ಇಸ್ಲಾಮಿ ಹಿಂದ್‌ನ ಅಸಿಮೊದ್ದೀನ್, ಚಂದ್ರಶೇಖರ ಭಂಡಾರಿ, ಮೊಹಮ್ಮದ್ ರಫಿ, ಬಸವರಾಜ ಮಿಮಿಕ್ರಿ ಹಾಗೂ ವಿಜಯಕುಮಾರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.