‘ಗಣತಿಯಲ್ಲಿ ವೀರಶೈವ ಲಿಂಗಾಯತ ಬರೆಸಿ’
ಅಖಿಲ ಭಾರತ ವೀರಶೈವ ಮಹಾಸಭಾ ಎಲ್ಲರನ್ನೂ ಒಗ್ಗೂಡಿಕೊಂಡು ಹೋಗುವ ಕೆಲಸ ಮಾಡುತ್ತಿದೆ ಎಂದು ಅಮರೇಗೌಡ ಪಾಟೀಲ ಬಯ್ಯಾಪುರ ಹೇಳಿದರು. ಸಭೆಯಲ್ಲಿ ಪಾಲ್ಗೊಂಡಿದ್ದವರೊಬ್ಬರು ಕೇಳಿದ ಪ್ರಶ್ನೆಗೆ ಸ್ಪಷ್ಟೀಕರಣ ನೀಡಿದ ಅವರು‘ವೀರಶೈವ ಲಿಂಗಾಯತಕ್ಕೆ ಪ್ರತ್ಯೇಕ ಧರ್ಮದ ಸ್ಥಾನಮಾನ ಕೊಡಿಸಲು ಮಹಾಸಭಾ ಹೋರಾಟ ನಡೆಸಿದೆ. ಜಾತಿ ಗಣತಿಯ ಧರ್ಮದ ಕಾಲಂನಲ್ಲಿ ವೀರಶೈವ ಲಿಂಗಾಯತ ಎಂದು ಹಾಗೂ ಜಾತಿ ಕಾಲಂನಲ್ಲಿ ತಮ್ಮ ಜಾತಿ ಹೆಸರು ನಮೂದಿಸಬೇಕು ಎಂದು ವೀರಶೈವ ಮಹಾಸಭಾ ತೀರ್ಮಾನಿಸಿದೆ’ ಎಂದು ತಿಳಿಸಿದರು.