ರಾಯಚೂರು: ‘ವೀರಶೈವ ಲಿಂಗಾಯತ ಜಂಗಮರನ್ನು ಎಸ್ಸಿ ಪಟ್ಟಿಗೆ ಸೇರಿಸಬಾರದು. ನಕಲಿ ಜಾತಿಪ್ರಮಾಣಪತ್ರ ಪಡೆದು ಅಸ್ಪೃಷ್ಯರಿಗೆ ಅನ್ಯಾಯ ಮಾಡುತ್ತಿರುವವರನ್ನು ಜೈಲಿಗೆ ತಳ್ಳಬೇಕು’ ಎಂದು ಮಾಜಿ ಸಚಿವ ಎಚ್. ಆಂಜನೇಯ ಒತ್ತಾಯಿಸಿದರು.

‘ಲಿಂಗಾಯತ ಜಂಗಮರು ಬೇಡ ಜಂಗಮರೆಂದು ಹೇಳಿಕೊಂಡು ಪರಿಶಿಷ್ಟ ಜಾತಿ ಸಮೀಕ್ಷೆಯಲ್ಲಿ ನಮೂದಿಸುತ್ತಿದ್ದಾರೆ. ಇದು ಸರಿಯಲ್ಲ. ಅಸ್ಪೃಶ್ಯರಲ್ಲದವರು ಪರಿಶಿಷ್ಟ ಜಾತಿಯ ಪ್ರಮಾಣಪತ್ರ ದುರುಪಯೋಗ ಪಡಿಸಿಕೊಳ್ಳಬಾರದು’ ಎಂದು ಶನಿವಾರ ಮಾಧ್ಯಮ ಗೋಷ್ಠಿಯಲ್ಲಿ ತಿಳಿಸಿದರು.

‘ಸುಳ್ಳುಜಾತಿ ಪ್ರಮಾಣಪತ್ರ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಸರ್ಕಾರ ಸಚಿವ ಸಂಪುಟ ಸಭೆ ನಡೆಸಿ ವೀರಶೈವ ಲಿಂಗಾಯತ ಬೇಡ ಜಂಗಮರನ್ನು ಎಸ್ಸಿ ಪಟ್ಟಿಗೆ ಸೇರಿಸದಂತೆ ಆದೇಶ ಹೊರಡಿಸಬೇಕು’ ಎಂದು ಒತ್ತಾಯಿಸಿದರು.

‘ಮೀಸಲಾತಿಯ ಲಾಭ ಪಡೆಯಲು ಯತ್ನಿಸುತ್ತಿರುವ ವೀರಶೈವ ಲಿಂಗಾಯತ ಬೇಡ ಜಂಗಮರನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡುವಂತೆ ಹೋರಾಟ ಮಾಡಲಾಗುವುದು‘ ಎಂದು ಎಚ್ಚರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.