ಬುಧವಾರ, ಅಕ್ಟೋಬರ್ 21, 2020
22 °C

ಮಾರುಕಟ್ಟೆ ಪುನರಾರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಿಂದ ಬಂದ್ ಆಗಿದ್ದ ನಗರದ ಉಸ್ಮಾನಿಯಾಯ ತರಕಾರಿ ಮಾರುಕಟ್ಟೆಯನ್ನು ಮಂಗಳವಾರದಿಂದ ಪುನರಾರಂಭಿಸಲಾಗಿದೆ.

ಶಾಸಕ ಡಾ. ಶಿವರಾಜ ಪಾಟೀಲ ಅವರು ಬೆಳಿಗ್ಗೆ ಮಾರುಕಟ್ಟೆಗೆ ಭೇಟಿ ನೀಡಿ ಮುನ್ನಚ್ಚರಿಕೆ ಕ್ರಮಗಳನ್ನು ಪರಿಶೀಲಿಸಿದರು. ಆನಂತರ ಮಾರುಕಟ್ಟೆಯಲ್ಲಿ ಸಂಚರಿಸಿ, ಗುಂಪು ಗುಂಪಾಗಿ ನಿಲ್ಲದೇ ಅಂತರ ಕಾಪಾಡಿಕೊಂಡು ಕೋವಿಡ್ ನಿಯಮ ಪಾಲನೆ ಮಾಡಬೇಕು ಎಂದು ಮನವಿ ಮಾಡಿದರು.

ನಿಯಮ ಉಲ್ಲಂಘಿಸಿದರೆ ಪುನಃ ಮಾರುಕಟ್ಟೆ ಬಂದ್ ಮಾಡುವ ಎಚ್ಚರಿಕೆ ಜಿಲ್ಲಾಧಿಕಾರಿ ನೀಡಿ ಅನುಮತಿ ನೀಡಿದ್ದಾರೆ. ಮಾರುಕಟ್ಟೆ ಪ್ರಾಂಗಣದಲ್ಲಿ ಸಿಸಿ ಕ್ಯಾಮರಾ ಅಳವಡಿಸಿ ಸಾರ್ವಜನಿಕರ ಚಲನವಲನ ಮೇಲೆ ನಿಗಾ ಇರಿಸಲಾಗುವುದು ಎಂದು ಶಾಸಕರು ಮಾಹಿತಿ ನೀಡಿದರು.

ನಗರಾಭಿವೃದ್ಧಿ ಪ್ರಾಧೀಕಾರದ ಅಧ್ಯಕ್ಷ ವೈ.ಗೋಪಲರೆಡ್ಡಿ, ಮುಖಂಡರಾದ ರವೀಂದ್ರ ಜಲ್ದಾರ, ಶಶಿರಾಜ ಮಸ್ಕಿ, ಮಹೇಂದ್ರರೆಡ್ಡಿ, ಉಸ್ಮಾನಿಯ ತರಕಾರಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಎನ್.ಮಹಾವೀರ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.