ರಾಯಚೂರು: ಯುಗಾದಿ ಹಾಗೂ ಈದ್ ಉಲ್ ಫಿತ್ರ್ ಒಂದೇ ಸಮಯದಲ್ಲಿ ಬಂದ ಕಾರಣ ಎರಡು ಸಮುದಾಯಗಳು ಹಬ್ಬದ ಸಂಭ್ರಮಾಚರಣೆಯಲ್ಲಿವೆ. ಹಬ್ಬಕ್ಕೆ ವಿಶೇಷ ಖಾದ್ಯ ಸಿದ್ಧಪಡಿಸುವ ಕಾರಣ ಸಹಜವಾಗಿಯೇ ಬೆಳ್ಳುಳ್ಳಿ ಹಾಗೂ ಹಸಿ ಶುಂಠಿಯ ಬೆಲೆಯಲ್ಲಿ ಹೆಚ್ಚಳವಾಗಿದೆ. ಹಸಿ ಶುಂಠಿ ಬೆಲೆಯಲ್ಲಿ ಶತಕ ಬಾರಿಸಿದರೆ, ಬೆಳ್ಳುಳ್ಳಿ ದ್ವಿಶತಕ ಬಾರಿಸಿದೆ. ಮೆಣಸಿನಕಾಯಿ ಬೆಲೆ ದುಪ್ಪಟ್ಟಾಗಿದೆ.

ಮೆಣಸಿನಕಾಯಿ, ತೊಂಡೆಕಾಯಿ, ಡೊಣ್ಣಮೆಣಸಿನಕಾಯಿ ಪ್ರತಿ ಕೆ.ಜಿಗೆ ₹ 80 ಆಗಿದೆ. ಪ್ರತಿ ಕ್ವಿಂಟಲ್ಗೆ ಹಿರೇಕಾಯಿ, ಬೆಂಡೆಕಾಯಿ, ಎಲೆಕೋಸು, ಹೂಕೋಸು, ಗಜ್ಜರಿ, ಬೀಟ್ರೂಟ್ ಬೆಲೆ ₹ 2 ಸಾವಿರ ಹೆಚ್ಚಾಗಿದೆ.

ಈರುಳ್ಳಿ, ಆಲೂಗಡ್ಡೆ, ಟೊಮೆಟೊ, ಬೀನ್ಸ್, ತೊಂಡೆಕಾಯಿ, ಡೊಣ್ಣಮೆಣಸಿನಕಾಯಿ, ತುಪ್ಪದ ಹಿರೇಕಾಯಿ ಹಾಗೂ ಸೌತೆಕಾಯಿ ಬೆಲೆ ಸ್ಥಿರವಾಗಿದೆ. ಯುಗಾದಿ ಹಬ್ಬಕ್ಕೆ ಬದನೆಕಾಯಿ ಮತ್ತು ಚವಳೆಕಾಯಿ ಮಾತ್ರ ಗ್ರಾಹಕರಿಗೆ ಸಾಥ್ ನೀಡಿವೆ.

ಮಹಾರಾಷ್ಟ್ರದ ನಾಸಿಕ್ನಿಂದ ಈರುಳ್ಳಿ ಹಾಗೂ ಬೆಳ್ಳುಳ್ಳಿ ಆವಕವಾಗಿದೆ. ಬೆಳಗಾವಿ ಜಿಲ್ಲೆಯಿಂದ ಹಸಿ ಮೆಣಸಿನಕಾಯಿ, ಸೊಪ್ಪು ಆವಕವಾಗಿದೆ. ಆಂಧ್ರ ಪ್ರದೇಶ, ತೆಲಂಗಾಣ ಗಡಿಗ್ರಾಮಗಳು ಹಾಗೂ ಜಿಲ್ಲೆಯ ಗ್ರಾಮೀಣ ಪ್ರದೇಶದಿಂದ ಎಲೆಕೋಸು, ಹೂಕೋಸು, ಬದನೆಕಾಯಿ, ಹಿರೇಕಾಯಿ, ಟೊಮೆಟೊ ಇಲ್ಲಿಯ ತರಕಾರಿ ಸಗಟು ಮಾರುಕಟ್ಟೆಗೆ ಬಂದಿದೆ.

‘ಬೇಸಿಗೆ ಬಿಸಿಲು ಹಾಗೂ ಹಬ್ಬದ ಕಾರಣ ಕೆಲ ಪ್ರಮುಖ ತರಕಾರಿಗಳ ಬೆಲೆ ಹೆಚ್ಚಾಗಿದೆ. ಬೇಸಿಗೆ ಮುಗಿಯುವವರೆಗೂ ತರಕಾರಿ ಬೆಲೆ ಕಡಿಮೆಯಾಗುವ ಸಾಧ್ಯತೆ ಕಡಿಮೆ’ ಎಂದು ತರಕಾರಿ ವ್ಯಾಪಾರಿ ಶಶಿಕುಮಾರ ಹೇಳುತ್ತಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.