ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರಿಗೆ ಮಾತ್ರ ತರಕಾರಿ ಮಾರಾಟಕ್ಕೆ ಅವಕಾಶ ನೀಡಲು ಮನವಿ

Last Updated 2 ಸೆಪ್ಟೆಂಬರ್ 2021, 15:08 IST
ಅಕ್ಷರ ಗಾತ್ರ

ರಾಯಚೂರು: ನಗರದ ಉಸ್ಮಾನಿಯಾ ತರಕಾರಿ ಮಾರುಕಟ್ಟೆ ಬಳಿ ಇರುವ ರೈತ ಮಾರುಕಟ್ಟೆಗೆ ರೈತರಿಗೆ ಮಾತ್ರ ಅವಕಾಶ ನೀಡಬೇಕು ಎಂದು ಒತ್ತಾಯಿಸಿ ರಾಯಚೂರು ಉಸ್ಮಾನಿಯಾ ತರಕಾರಿ ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆಗುರುವಾರ ಮನವಿ ಸಲ್ಲಿಸಿದರು.

ರೈತ ಮಾರುಕಟ್ಟೆಯಲ್ಲಿ ರೈತರಿಗೆ ಮಾತ್ರ ಅವಕಾಶ ನೀಡಬೇಕು. ತರಕಾರಿ ಮಾರುಕಟ್ಟೆಯಲ್ಲಿ ಅಂಗಡಿ ಹೊಂದಿರುವ ವ್ಯಾಪಾರಸ್ಥರಿಗೆ ಅವಕಾಶ ನೀಡಬಾರದು. ಇಲ್ಲಿ ಸ್ವಚ್ಛತೆ ಹಾಗೂ ವೈಯಕ್ತಿಕ ಅಂತರ ಕಾಪಾಡಿಕೊಳ್ಳಲು ನಗರಸಭೆಯ ಸಿಬ್ಬಂದಿ ನೇಮಕ ಮಾಡಬೇಕು ಎಂದು ಆಗ್ರಹಿಸಿದರು.

ನಗರದ ತೀನ್ ಕಂದಿಲ್ ವೃತ್ತದಿಂದ ಅಶೋಕ ಡಿಪೋ ವೃತ್ತದವರೆಗೆ ರಸ್ತೆ ವಿಸ್ತರಣೆಯಲ್ಲಿ ಆಗಿರುವ ತಾರತಮ್ಯ ಸರಿಪಡಿಸಲು ಬಡಾವಣೆಯ ನಿವಾಸಿಗಳು ಅನೇಕ ಬಾರಿ ದೂರು ಸಲ್ಲಿಸಿದರೂ ಯಾವುದೇ ಪ್ರಯೋಜವಾಗಿಲ್ಲ. ವಾರ್ಡ್ ನಂಬರ್ 12 ಮತ್ತು 14ರ ನಿವಾಸಿಗಳಿಗೆ ನ್ಯಾಯ ದೊರಕಿಸಿಕೊಡಬೇಕು. 50 ಅಡಿಗಳ ರಸ್ತೆ ವಿಸ್ತರಣೆಗೆ ಒಪ್ಪಿಗೆ ಪಡೆದಿದ್ದು, ರಸ್ತೆ ಮಧ್ಯಭಾಗದಿಂದ ತಲಾ 25 ಅಡಿ ಸಮಾನಂತರವಾಗಿ ರಸ್ತೆ ವಿಸ್ತರಣೆ ಮಾಡಬೇಕು ಎಂದು ಒತ್ತಾಯಿಸಿದರು.

ಸಂಘದ ಅಧ್ಯಕ್ಷ ಎನ್.ಮಹಾವೀರ, ಕಾರ್ಯದರ್ಶಿ ಪ್ರಭುನಾಯಕ, ಪದಾಧಿಕಾರಿ ಉದಯ, ಬಸವರಾಜ, ರಮೇಶ ಬಳ್ಳಾರಿ, ಶ್ಯಾಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT