ಸಿಂಧನೂರು: ‘ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಮಯದಲ್ಲಿ ಜಾರಿಗೆ ತಂದ ಜನಪರ ಯೋಜನೆಗಳಿಗೆ ತಿಲಾಂಜಲಿ ಇಟ್ಟಿರುವ ಬಿಜೆಪಿ ಸರ್ಕಾರಕ್ಕೆ ತಕ್ಕಪಾಠ ಕಲಿಸಬೇಕಾದರೆ ಪ್ರಸ್ತುತ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶರಣೇಗೌಡ ಬಯ್ಯಾಪುರ ಅವರಿಗೆ ಪ್ರಥಮ ಪ್ರಾಶಸ್ತ್ಯ ಮತ ನೀಡಿ ಗೆಲ್ಲಿಸಬೇಕು’ ಎಂದು ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಮನವಿ ಮಾಡಿದರು.

ತಾಲ್ಲೂಕಿನ ಮಲ್ಲದಗುಡ್ಡ ಕ್ಯಾಂಪ್ನಲ್ಲಿ ಶನಿವಾರ ರಾತ್ರಿ ನಡೆದ ಏಳು ಗ್ರಾಮ ಪಂಚಾಯಿತಿ ಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಗ್ರಾಮ ಪಂಚಾಯಿತಿಗಳಿಗೆ ಅಧಿಕಾರ ವಿಕೇಂದ್ರೀಕರಣ ಮಾಡುವ ಕಾನೂನನ್ನು ಜಾರಿಗೆ ತಂದಿದ್ದಾರೆ. ಕಲ್ಯಾಣ ಕರ್ನಾಟಕಕ್ಕೆ ಕಾಂಗ್ರೆಸ್ ನೇತಾರರಾದ ಸೋನಿಯಾಗಾಂಧಿ ಮತ್ತು ರಾಹುಲ್ಗಾಂಧಿ 371 (ಜೆ) ಮೂಲಕ ವಿಶೇಷ ಸ್ಥಾನಮಾನ ನೀಡಿದ್ದಾರೆ. ಇದರ ಪರಿಣಾಮ ಈ ಭಾಗದ ಸಾವಿರಾರು ಜನರಿಗೆ ಉದ್ಯೋಗ, ಮೆಡಿಕಲ್ ಕಾಲೇಜು ಪ್ರವೇಶ, ಉದ್ಯೋಗದಲ್ಲಿ ಬಡ್ತಿ ಸೇರಿದಂತೆ ಸರ್ಕಾರದ ಹಲವಾರು ಸೌಕರ್ಯಗಳು ಲಭಿಸಿವೆ ಎಂದರು.

‘ಗ್ರಾಮ ಪಂಚಾಯಿತಿಗಳ ಅಭಿವೃದ್ಧಿಗೆ ನಿಮ್ಮ ಮಗನಾಗಿ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ’ ಎಂದು ಅಭ್ಯರ್ಥಿ ಶರಣೇಗೌಡ ಬಯ್ಯಾಪುರ ಭರವಸೆ ನೀಡಿದರು.

ಮಸ್ಕಿ ಶಾಸಕ ಬಸನಗೌಡ ತುರ್ವಿಹಾಳ ಮಾತನಾಡಿ,‘ರಾಯಚೂರು ಹಾಗೂ ಕೊಪ್ಪಳ ಕ್ಷೇತ್ರಗಳು ಅಭಿವೃದ್ಧಿ ಹೊಂದಬೇಕಾದರೆ ಸರಳ ವ್ಯಕ್ತಿತ್ವದ ಶರಣೇಗೌಡರಿಗೆ ಮತ ನೀಡಿ ಗೆಲ್ಲಿಸಬೇಕು’ ಎಂದರು.

ಮಸ್ಕಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನಗೌಡ ಯದ್ದಲದೊಡ್ಡಿ, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮುದ್ದಾಪುರ, ಮುಖಂಡರಾದ ಮಲ್ಲನಗೌಡ ದೇವರಮನಿ, ಬುಜ್ಜಯ್ಯ, ಫಾರುಕ್ಸಾಬ, ಉಸ್ಮಾನಸಾಬ, ಕಮ್ಮವಾರಿ ಸಂಘದ ಅಧ್ಯಕ್ಷ ಪಿ.ಮುರಳಿಕೃಷ್ಣ, ಯುವ ಕಾಂಗ್ರೆಸ್ ಅಧ್ಯಕ್ಷ ಹನುಮೇಶ ಬಾಗೋಡಿ ಸೇರಿದಂತೆ ವಿರೂಪಾಪುರ, ಗುಂಜಳ್ಳಿ, ತಿಡಿಗೋಳ, ಗುಂಡಾ, ಬಪ್ಪೂರು, ಕಲ್ಮಂಗಿ, ಉಮಲೂಟಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು ಭಾಗಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.