ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು: ವಿಧಾನ ಪರಿಷತ್ ಚುನಾವಣೆ: ಅಗತ್ಯ ಸಿದ್ದತೆಗೆ ಸೂಚನೆ

ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣಾ ವೀಕ್ಷಕ ಎನ್, ಜಯರಾಮ ಅಧ್ಯಕ್ಷತೆಯಲ್ಲಿ ಸಭೆ
Last Updated 3 ಡಿಸೆಂಬರ್ 2021, 13:31 IST
ಅಕ್ಷರ ಗಾತ್ರ

ರಾಯಚೂರು: ವಿಧಾನ ಪರಿಷತ್ ಚುನಾವಣೆಗಾಗಿ ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಯ ಚುನಾವಣಾ ‌ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಿ ಎಂದು ರಾಯಚೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣಾ ವೀಕ್ಷಕ ಎನ್, ಜಯರಾಮ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ರಾಯಚೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣೆ-2021 ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಈಗಾಗಲೇ ಉತ್ತಮ ರೀತಿಯಲ್ಲಿ ಚುನಾವಣಾ ತಯಾರಿ ಮಾಡಿದ್ದು, ಮುಂದೆಯೂ ಹೀಗೆ ಮಾಡಿಕೊಂಡು ಹೋಗಬೇಕು. ಚುನಾವಣೆಗೆ ನಿಯೋಜಿತ ಅಧಿಕಾರಿಗಳು ಯಾವುದೇ ಕಾರಣಕ್ಕೆ ತಮಗೆ ನಿರ್ವಸಿದ ಕೆಲಸವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಚುನಾವಣಾ ಕರ್ತವ್ಯ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಚುನಾವಣೆಗೆ ಕೆಲವೇ ದಿನಬಾಕಿ ಇರುವ ಸಂದರ್ಭದಲ್ಲಿ ಅಭ್ಯರ್ಥಿಗಳು ಮತದಾರರಿಗೆ ಹಲವಾರು ಆಸೆ ಆಮಿಷಗಳನ್ನು ತೋರಿಸುವುದನ್ನು ಮಾಡುತ್ತಾರೆ. ಹಾಗಾಗಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತ ಅಧಿಕಾರಿಗಳು ಈ ಕುರಿತು ಎಲ್ಲಾ ಕಡೆ ಗಮನಹರಿಸಬೇಕು. ಚುನಾವಣೆ ಇನ್ನೂ ಒಂದು ವಾರ ಉಳಿದಿದ್ದು, ಬಹಳ ಮಹತ್ವದಾಗಿದೆ. ಹಾಗಾಗಿ ಅಧಿಕಾರಿಗಳು ಸಿದ್ದತೆಗಳ ಕುರಿತು ಖುದ್ದಾಗಿ ಸ್ಥಳ ಪರಿಶೀಲನೆ ಮಾಡಿ ಮತದಾನ ಕೇಂದ್ರಗಳಲ್ಲಿಯ ಅಗತ್ಯ ಸಿದ್ದತೆಗಳ ಬಗ್ಗೆ ಪರಿಶೀಲಿಸಬೇಕು ಎಂದು ತಿಳಿಸಿದರು.

ಈ ಬಾರಿ ಚುನಾವಣಾ ಆಯೋಗ ಮತದಾನ ಕೇಂದ್ರದಲ್ಲಿ ಕಡ್ಡಾಯವಾಗಿ ವಿಡಿಯೋ ಗ್ರಾಫಿ ಮಾಡುವಂತೆ ಸೂಚಿಸಿದ್ದು, ಅದನ್ನು ಎಲ್ಲಾ ಮತದಾನ ಕೇಂದ್ರಗಳಲ್ಲಿ ಪಾಲನೆ ಮಾಡಬೇಕು. ಮತ ಎಣಿಕೆ ಸಿಬ್ಬಂದಿಗೆ ಎಲ್ಲಾ ರೀತಿಯ ಸೂಚನೆಗಳನ್ನು ಕಟ್ಟುನಿಟ್ಟಾಗಿ ನೀಡಿ ಕೌಂಟಿಂಗ್ ಹಾಲ್‌ನಲ್ಲಿ ಯಾವುದೇ ಸಮಸ್ಯೆಗಳಾಗದಂತೆ ನೋಡಿಕೊಳ್ಳಬೇಕು. ಈ ಚುನಾವಣೆಯು ಶಾಂತಿಯುತ ಹಾಗೂ ಸುಗಮವಾಗಿ ನಡೆಯುವಂತೆ ಚುನಾವಣೆಗೆ ನಿಯೋಜಿತ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಹೇಳಿದರು.

ರಾಯಚೂರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ, ಅವಿನಾಶ ಮೆನನ್, ಕೊಪ್ಪಳ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ವಿಕಾಸ ಕಿಶೋರ್ ಸುರಳ್ಕರ್, ಕೊಪ್ಪಳ ಜಿಲ್ಲಾ ಸ್ವೀಫ್ ಸಮಿತಿಯ ಅಧ್ಯಕ್ಷ ಬಿ,ಫೌಜಿಯಾ ತರನ್ನುಮ್, ರಾಯಚೂರು ಜಿಲ್ಲಾ ಪೋಲಿಸ್ ಅಧಿಕ್ಷಕ ನಿಖಿಲ್ ಬಿ, ಹಾಗೂ ರಾಯಚೂರು ಮತ್ತು ಕೊಪ್ಪಳ ಜಿಲ್ಲೆಯ ಚುನಾವಣಾ ನೋಡಲ್ ಅಧಿಕಾರಿಗಳು ಮತ್ತು ಚುನಾವಣಾ ಕರ್ತವ್ಯಕ್ಕೆ ನಿಯೋಜಿತ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT