ಬುಧವಾರ, ಮಾರ್ಚ್ 29, 2023
30 °C
ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಟಿ.ಎಂ.ವಿಜಯಭಾಸ್ಕರ್ ಹೇಳಿಕೆ

ಆಡಳಿತಾತ್ಮಕ ಸುಧಾರಣೆಯ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಲಿಂಗಸುಗೂರು: ‘ಮೊರಾರ್ಜಿ, ಕಿತ್ತೂರುರಾಣಿ ಚೆನ್ನಮ್ಮ ವಸತಿ ಶಾಲೆಗಳು ಸೇರಿದಂತೆ ವಿವಿಧ ಇಲಾಖೆಗಳ ಮೆಟ್ರಿಕ್‍ ನಂತರದ ಮತ್ತು ಪೂರ್ವ ವಸತಿ ನಿಲಯಗಳ, ಆಶ್ರಮ ಶಾಲೆಗಳಲ್ಲಿ ಆಡಳಿತಾತ್ಮಕ ಸುಧಾರಣೆಗಳ ಕುರಿತು ಚರ್ಚಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು’ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಟಿ.ಎಂ.ವಿಜಯಭಾಸ್ಕರ್ ಹೇಳಿದರು.

ಇಲ್ಲಿಗೆ ಬುಧವಾರ ಭೇಟಿ ನೀಡಿ, ಅಧಿಕಾರಿಗಳ ಸಭೆ ನಡೆಸಿದ ನಂತರ ಮಾತನಾಡಿದ ಅವರು, ‘ಕಂಪ್ಯೂಟರ್‌ ವ್ಯವಸ್ಥೆ ಬಂದ ಮೇಲೆ ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಿರುವ ಕೆಲಸ ಹಾಗೂ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ವಿಧಾನವನ್ನು ಇನ್ನೂ ಸರಳೀಕರಣಗೊಳಿಸುವಲ್ಲಿ ಮಾಡಬಹುದಾದ ಯೋಜನೆಗಳ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ‘ ಎಂದು ಹೇಳಿದರು.

‘ಸಮಾಜ ಕಲ್ಯಾಣ, ಬುಡಕಟ್ಟು ಕಲ್ಯಾಣ, ಅಲ್ಪಸಂಖ್ಯಾತ ಇಲಾಖೆ, ಆಶ್ರಮ ಶಾಲೆಗಳು, ವಸತಿ ಶಾಲೆಗಳ ಮುಖ್ಯಸ್ಥರೊಂದಿಗೆ ಜಿಲ್ಲೆಯಾದ್ಯಂತ ಸಂಚರಿಸಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಈಗಿರುವ ಆಡಳಿತದಲ್ಲಿನ ಸಮಸ್ಯೆಗಳು, ಸರಳೀಕರಣ ಮಾಡಬಹುದಾದ ವ್ಯವಸ್ಥೆಗಳ ಕುರಿತಾದ ಸಮಗ್ರ ಮಾಹಿತಿಗಳನ್ನು ಸರ್ಕಾರದ ಗಮನಕ್ಕೆ ತರಲಾಗುವುದು’ ಎಂದು ವಿವರಿಸಿದರು.

ಉಪ ವಿಭಾಗಾಧಿಕಾರಿ ರಾಜಶೇಖರ ಡಂಬಳ, ಜಿಲ್ಲಾ ಸಮಾಜಕಲ್ಯಾಣ ಇಲಾಖೆ ಉಪ ನಿರ್ದೇಶಕ ಕೆ.ಎಚ್‍. ಸತೀಶ, ಜಿಲ್ಲಾ ಬಡಕಟ್ಟು ಇಲಾಖೆ ಉಪ ನಿರ್ದೇಶಕ ಚಿದಾನಂದ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ರವೀಂದ್ರ, ತಾಲ್ಲೂಕು ಅಲ್ಪಸಂಖ್ಯಾತರ ಅಧಿಕಾರಿ ಷಡಕ್ಷರಿ, ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ಮರಿಯಮ್ಮ ಸೇರಿದಂತೆ ಇತರೆ ಸಿಬ್ಬಂದಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು