ಭಾನುವಾರ, ಜೂನ್ 26, 2022
22 °C

ಎಸ್ಸೆಸ್ಸೆಲ್ಸಿ: ಮರು ಮೌಲ್ಯಮಾಪನ, ವಿಜಯಲಕ್ಷ್ಮೀ ರಾಜ್ಯಕ್ಕೆ ಪ್ರಥಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಕ್ತಿನಗರ (ರಾಯಚೂರು): ಇಲ್ಲಿನ ಡಿಎವಿ ಪಬ್ಲಿಕ್ ಪ್ರೌಢಶಾಲೆಯ ವಿದ್ಯಾರ್ಥಿನಿ ಎಸ್.ಕೆ.ವಿಜಯಲಕ್ಷ್ಮಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಒಟ್ಟು 625 ಅಂಕಗಳು ಬಂದಿದ್ದು, ರಾಜ್ಯಕ್ಕೆ ಪ್ರಥಮ ಸ್ಥಾನ ಹಂಚಿಕೊಂಡಿದ್ದಾಳೆ.

ವಿಜ್ಞಾನ ವಿಷಯದಲ್ಲಿ ನೂರಕ್ಕೆ 98 ಅಂಕ ಬಂದಿದ್ದವು. ಹೀಗಾಗಿ ವಿದ್ಯಾರ್ಥಿನಿ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದಳು. ಇದೀಗ ಎರಡು ಅಂಕಗಳು ಬಂದಿದ್ದು, ಎಲ್ಲಾ ವಿಷಯಗಳಲ್ಲಿ ನೂರಕ್ಕೆ ನೂರು ಅಂಕ ಪಡೆದಿದ್ದಾಳೆ. 

ಈ ಮೊದಲು 623 ಅಂಕಗಳನ್ನು ಪಡೆದು ರಾಜ್ಯಕ್ಕೆ ತೃತೀಯ ಸ್ಥಾನದಲ್ಲಿದ್ದ ವಿಜಯಲಕ್ಷ್ಮಿ, ಈಗ ಪ್ರಥಮ ಸ್ಥಾನದಲ್ಲಿ ಗುರುತಿಸಿಕೊಂಡಿದ್ದಾಳೆ ಎಂದು ಶಾಲೆಯವರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು