ಉಪಚುನಾವಣೆಯಲ್ಲಿ ವಿಜಯೇಂದ್ರ ಅಭ್ಯರ್ಥಿ ಆಗುವುದಿಲ್ಲ: ಬಿ.ಎಸ್ ಯಡಿಯೂರಪ್ಪ

ರಾಯಚೂರು: 'ಈ ಉಪಚುನಾವಣೆಯಲ್ಲಿ ಬಿ.ವೈ. ವಿಜಯೇಂದ್ರ ಅಭ್ಯರ್ಥಿ ಆಗುವುದಿಲ್ಲ' ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದರು.
ಸಿಂಧನೂರಿನಲ್ಲಿ ವಾಸ್ತವ್ಯ ಹೂಡಿದ್ದ ಅವರು, ಭಾನುವಾರ ಬೆಳಿಗ್ಗೆ ಕೆ. ವಿರೂಪಾಕ್ಷಪ್ಪ ಅವರ ಮನೆಯಲ್ಲಿ ಉಪಹಾರ ಸೇವನೆಗೆ ಬಂದಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.
'ಮೈಸೂರಿನಲ್ಲಿಯೆ ಉಳಿದುಕೊಳ್ಳುವಂತೆ ಒತ್ತಾಯ ಇರುವುದರಿಂದ, ವಿಜಯೇಂದ್ರ ಅಲ್ಲಿ ಮನೆ ಮಾಡಿಕೊಳ್ಳಲಿದ್ದಾರೆ. ಅಲ್ಲಿದ್ದುಕೊಂಡು ಸುತ್ತಲಿನ ಜಿಲ್ಲೆಗಳಲ್ಲಿ ಪಕ್ಷ ಸಂಘಟನೆ ಮಾಡುವರು' ಎಂದರು.
'ಮಸ್ಕಿ ಹಾಗೂ ಬಸವಕಲ್ಯಾಣದಲ್ಲಿ ಬಿಜೆಪಿ ಈಗಾಗಲೇ ಗೆದ್ದಾಗಿದೆ. ಬೆಳಗಾವಿಯಲ್ಲಿ ಗೆಲ್ಲುವ ತಯಾರಿ ಮಾಡುತ್ತಿದ್ದೇವೆ' ಎಂದು ಹೇಳಿದರು. ಉಪಚುನಾವಣೆ ಬಳಿಕ ಮುಖ್ಯಮಂತ್ರಿ ಬದಲಾವಣೆ ಆಗಲಿದೆ ಎಂದು ಬಸನಗೌಡ ಯತ್ನಾಳ್ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.
ದೇವಸ್ಥಾನ ಭೇಟಿ: ಸಿಂಧನೂರು ತಾಲ್ಲೂಕಿನ ಗೋರೆಬಾಳ ಗ್ರಾಮದ ಶರಣ ಬಸವೇಶ್ವರ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.