ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಕಾಲೇಜಿನಲ್ಲಿ ರಾಮತ್ನಾಳ ಗ್ರಾಮ ಲೆಕ್ಕಾಧಿಕಾರಿ ಬರ್ತ್ ಡೇ ಆಚರಣೆ: ಆಕ್ಷೇಪ

Published 1 ಮೇ 2024, 14:05 IST
Last Updated 1 ಮೇ 2024, 14:05 IST
ಅಕ್ಷರ ಗಾತ್ರ

ಸಿಂಧನೂರು: ನಗರದ ಸರ್ಕಾರಿ ಡಿಗ್ರಿ ಕಾಲೇಜಿನಲ್ಲಿ ಭಾನುವಾರ ತಾಲ್ಲೂಕಿನ ರಾಮತ್ನಾಳ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಒಬ್ಬರು ಚುನಾವಣಾ ಕರ್ತವ್ಯದ ವೇಳೆಯಲ್ಲಿಯೇ ಜನ್ಮದಿನವನ್ನು ಆಚರಣೆ ಮಾಡಿಕೊಂಡಿರುವ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಅಧಿಕಾರಿಗಳ ಜನ್ಮದಿನದಂದು ಪರಸ್ಪರ ಶುಭಾಶಯ ತಿಳಿಸುವುದು, ಕರ್ತವ್ಯ ಸಮಯ ಹೊರತುಪಡಿಸಿ ಖಾಸಗಿಯಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಸಾಮಾನ್ಯವಾಗಿದೆ. ಆದರೆ ಕರ್ತವ್ಯದ ವೇಳೆಯಲ್ಲಿ ಬರ್ತ್ ಡೇ ಆಚರಿಸಿದರೆ ಹೇಗೆ, ದಿನವೂ ಒಬ್ಬರಿಲ್ಲ ಒಬ್ಬ ಅಧಿಕಾರಿಗಳ ಜನ್ಮದಿನ ಇದ್ದರೆ ದಿನವೂ ಆಚರಣೆ ಮಾಡಿಕೂಳ್ಳುತ್ತ ಕೂಡಲು ಸಾಧ್ಯವೇ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

ಸಹಾಯಕ ಚುನಾವಣಾಧಿಕಾರಿ ಮಹೇಶ ಪೋತೆದಾರ್ ಹಾಗೂ ತಹಶೀಲ್ದಾರ್ ಅರುಣ್ ಎಚ್.ದೇಸಾಯಿ ಅವರ ಸಮ್ಮುಖದಲ್ಲಿಯೇ ಗ್ರಾಮ ಲೆಕ್ಕಾಧಿಕಾರಿ ಬರ್ತ್ ಡೇ ಆಚರಣೆ ಮಾಡಿಕೊಂಡಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆಲ ಇಲಾಖೆಯ ಅಧಿಕಾರಿಗಳಿಗೆ ಭಾನುವಾರವೂ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದು, ಹಲವು ಮಹತ್ವದ ಜವಾಬ್ದಾರಿ ಹೊಣೆಗಾರಿಕೆಯನ್ನು ನೀಡಲಾಗಿದೆ. ಚುನಾವಣಾ ಕರ್ತವ್ಯದ ವೇಳೆಯಲ್ಲಿಯೇ ಸರ್ಕಾರಿ ಡಿಗ್ರಿ ಕಾಲೇಜಿನಲ್ಲಿ ಕೇಕ್ ಕತ್ತರಿಸಿ ಜನ್ಮದಿನ ಆಚರಿಸಿಕೊಂಡಿರುವುದು ಸಾರ್ವಜನಿಕರ ಆಕ್ಷೇಪಕ್ಕೆ ಕಾರಣವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT