ರಾಯಚೂರು: ಕೃಷ್ಣಾ ನದಿ ಮೂಲಕ ತಾಲ್ಲೂಕಿನ ಡಿ.ರಾಂಪುರ ಕೆರೆ ಸೇರಿಕೊಂಡಿದ್ದ ಭಾರೀ ಗಾತ್ರದ ಮೊಸಳೆಯನ್ನು ಗುರುವಾರ ಗ್ರಾಮಸ್ಥರೇ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ.
ಗ್ರಾಮದ ಕೆರೆಗೆ ನೀರು ಕುಡಿಯಲು ಹೋದ ಕುರಿಗಳನ್ನು, ಹಂದಿಗಳನ್ನು ಮೊಸಳೆ ತಿಂದು ಹಾಕುತ್ತಿತ್ತು. ಇದನ್ನು ಗಮನಿಸಿದ್ದ ಗ್ರಾಮಸ್ಥರು ರಾಯಚೂರು ಪ್ರಾದೇಶಿಕ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಫೋನ್ ಮೂಲಕ ತಿಳಿಸಿದ್ದರು. ಆದರೂ ಅರಣ್ಯ ಇಲಾಖೆಯ ಅಧಿಕಾರಿಗಳು ಗ್ರಾಮಸ್ಥರ ಮನವಿಗೆ ಸ್ಪಂದಿಸಿರಲಿಲ್ಲ.