ರಾಯಚೂರು: ನಾರಾಯಣಪುರ ಜಲಾಶಯದಲ್ಲಿ ಪ್ರಸ್ತುತ ಶೇಕಡ 80.27ರಷ್ಟು ನೀರು ಸಂಗ್ರಹವಿದ್ದು, ಕೃಷ್ಣಾ ನದಿಗೆ 1.10 ಲಕ್ಷ ಕ್ಯೂಸೆಕ್ ನೀರು ಹರಿದು ಬಿಡಲಾಗಿದೆ. ನದಿ ಪಾತ್ರದ ಗ್ರಾಮಗಳ ಜನರು ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಲಾಗಿದೆ.

ಜಲಾಶಯದ ಮೇಲ್ಭಾಗದ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ ಅಣೆಕಟ್ಟೆಯ ಹೊರಹರಿವು ಹೆಚ್ಚಾಗಿದೆ. ಇನ್ನು 1,10,000 ಕ್ಯೂಸೆಕ್ ಒಳಹರಿವು ಬರುವ ಸಾಧ್ಯತೆ ಇದೆ. ಶನಿವಾರ ಮಧ್ಯಾಹ್ನ 3 ಗಂಟೆಯಿಂದ ಹೊರಹರಿವನ್ನು 84,445 ಕ್ಯೂಸೆಕ್ನಿಂದ 1.10 ಲಕ್ಷ ಕ್ಯೂಸೆಕ್ಗೆ ಹಂತ ಹಂತವಾಗಿ ಹೆಚ್ಚಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ನಾರಾಯಣಪುರ ಅಣೆಕಟ್ಟಿನ ಕೆಳಭಾಗದಲ್ಲಿರುವ ನದಿ ಪಾತ್ರದ ಜನರು ಎಚ್ಚರಿಕೆ ವಹಿಸಬೇಕು. ಜಾನುವಾರುಗಳನ್ನು ನದಿಗಳಿಗೆ ಇಳಿಸಬಾರದು. ಜನರೂ ನದಿ ನೀರಿಗೆ ಇಳಿಬಾರದು’ ಎಂದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.