ಭಾನುವಾರ, ಸೆಪ್ಟೆಂಬರ್ 19, 2021
23 °C

ನ್ಯಾಯಾಲಯದ ಆದೇಶ ಉಲ್ಲಂಘನೆ: ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ನಗರಸಭೆಯ ಪೌರಾಯುಕ್ತ ವೆಂಕಟೇಶ, ಜೈಪಾಲರೆಡ್ಡಿ, ಮೌನೇಶ ಸೇರಿದಂತೆ ಅಧಿಕಾರಿಗಳ ತಂಡವು ಮಹಿಳೆಯು ಹಾಕಿಕೊಂಡಿದ್ದ ತಾತ್ಕಾಲಿಕ ಟಿನ್ ಶೆಡ್‌ನ್ನು ನ್ಯಾಯಾಲಯ ಆದೇಶ ಉಲ್ಲಂಘನೆ ಮಾಡಿ ತೆರವುಗೊಳಿಸಿ ದೌರ್ಜನ್ಯ ಎಸಗಿದೆ. ಈ ಅಧಿಕಾರಿಗಳ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿ ಮಹಾಬೋಧಿ ವೃಕ್ಷ ಎಜುಕೇಷನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ಮುಖಂಡರು ಜಿಲ್ಲಾಡಳಿತ ಕಚೇರಿಗೆ ಗುರುವಾರ ಮನವಿ ಸಲ್ಲಿಸಿದರು.

ನಗರದ ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ ನಗರಸಭೆ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದರೂ ಕ್ರಮ ಕೈಗೊಂಡಿಲ್ಲ. ದೂರುದಾರರಿಗೆ ಅಧಿಕಾರಿಗಳಿಂದ ಪ್ರಕರಣ ಹಿಂಪಡೆಯುವಂತೆ ಒತ್ತಡ ಹಾಗೂ ಬೆದರಿಕೆ ಹಾಕಲಾಗುತ್ತಿದೆ ಎಂದು ಆರೋಪಿಸಿದರು.

ಟ್ರಸ್ಟ್ ಅಧ್ಯಕ್ಷೆ ನಾಗರತ್ನ, ಉಲಾಧ್ಯಕ್ಷೆ ಪ್ರಾಣೇಶ, ಕವಿತಾ, ಚಂದ್ರಶೇಖರ್‌ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು