ತಾಯಿ-ಮಕ್ಕಳ ಆಸ್ಪತ್ರೆಗಿಲ್ಲ ಉದ್ಘಾಟನೆ ಭಾಗ್ಯ
ಮೂರು ವರ್ಷಗಳ ಹಿಂದೆಯೇ ಆರಂಭಗೊಂಡ ತಾಯಿ-ಮಕ್ಕಳ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ ಕಾಮಗಾರಿಯು ಪೂರ್ಣಗೊಂಡಿದೆ. ಆದರೆ ಉದ್ಘಾಟನೆ ಭಾಗ್ಯ ಸಿಕ್ಕಿಲ್ಲ. ಪಾಲಕರು ಅನಿವಾರ್ಯವಾಗಿ ಖಾಸಗಿ ಆಸ್ಪತ್ರೆಯ ಬಾಗಿಲು ತಟ್ಟುವಂತಾಗಿದೆ. ಹೈಟೆಕ್ ಆಗಿ ನಿರ್ಮಿಸಿರುವ ತಾಯಿ-ಮಕ್ಕಳ ಆಸ್ಪತ್ರೆ ಆರಂಭಗೊಂಡರೆ ಬಡರೋಗಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಬಗ್ಗೆ ಶಾಸಕರು ಹಾಗೂ ಆಸ್ಪತ್ರೆಯ ಮೇಲಧಿಕಾರಿಗಳು ಗಮನ ಹರಿಸಬೇಕು ಎಂದು ಮನುಜಮತ ಬಳಗದ ಪ್ರಧಾನ ಕಾರ್ಯದರ್ಶಿ ಬಸವರಾಜ ಬಾದರ್ಲಿ ಒತ್ತಾಯಿಸಿದ್ದಾರೆ.