ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಯಚೂರು | ಜಿಲ್ಲೆಯ ಪ್ರವಾಸಿ ತಾಣಗಳ ಆಯ್ಕೆಗೆ ಆನ್‌ಲೈನ್ ಮತ ಹಾಕಿ: ಜಿಲ್ಲಾಧಿಕಾರಿ

Published 20 ಆಗಸ್ಟ್ 2024, 14:02 IST
Last Updated 20 ಆಗಸ್ಟ್ 2024, 14:02 IST
ಅಕ್ಷರ ಗಾತ್ರ

ರಾಯಚೂರು: ಕೇಂದ್ರದ ಪ್ರವಾಸೋದ್ಯಮ ಇಲಾಖೆಯು ಪ್ರವಾಸಿ ತಾಣಗಳನ್ನು ಗುರುತಿಸಿ ಅಭಿವೃದ್ಧಿಪಡಿಸುವ ದೃಷ್ಟಿಯಿಂದ ಸಾರ್ವಜನಿಕರು ಮತ್ತು ಪ್ರವಾಸಿಗರೆ ಪ್ರವಾಸೋದ್ಯಮ ತಾಣಗಳನ್ನು ಆಯ್ಕೆ ಮಾಡಲು ದೇಖೋ ಅಪನಾ ದೇಶ-ಪೀಪಲ್ ಚಾಯಿಸ್ 2024 ಕಾರ್ಯಕ್ರಮ ಆಯೋಜಿಸಲಾಗಿದೆ.

ಜಿಲ್ಲೆಯ ಜನರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ರಾಯಚೂರು ಜಿಲ್ಲೆಯ ಪ್ರವಾಸಿ ತಾಣಗಳನ್ನು ಆಯ್ಕೆ ಮಾಡಬೇಕು ಎಂದು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಹಾಗೂ ಜಿಲ್ಲಾಧಿಕಾರಿ ನಿತೀಶ್‌ ಕೆ. ಮನವಿ ಮಾಡಿದ್ದಾರೆ.

ಸಾರ್ವಜನಿಕರು ಮತ್ತು ಪ್ರವಾಸಿಗರು https://innovationindia.mygov.in/dekho-apna-desh/ ಇಲ್ಲಿಗೆ ಭೇಟಿ ನೀಡಿ ಸೆಪ್ಟೆಂಬರ್ 15ರೊಳಗೆ ತಮ್ಮ ಆಯ್ಕೆಯನ್ನು ಖಚಿತಪಡಿಸುವ ಮೂಲಕ ಜಿಲ್ಲೆಯ ಪ್ರವಾಸಿ ತಾಣಗಳ ಕುರಿತು ಮತ ಹಾಕಬೇಕು ಎಂದು ಕೋರಿದ್ದಾರೆ.

ಜಿಲ್ಲೆಯ ಪ್ರವಾಸೋದ್ಯಮವನ್ನು ಮೇಲ್ದರ್ಜೆಗೇರಿಸಲು ಧಾರ್ಮಿಕ, ಸಾಂಸ್ಕೃತಿಕ, ಪಾರಂಪರಿಕ, ಐತಿಹಾಸಿಕ, ನೈಸರ್ಗಿಕ ಹಾಗೂ ವನ್ಯಜೀವಿ ಮತ್ತು ಸಾಹಸ ಚಟುವಟಿಕೆಗಳು ಹಾಗೂ ಇತರೆ ಪ್ರಮುಖ ಪ್ರವಾಸಿ ತಾಣಗಳನ್ನು ಗುರುತಿಸಿ ಮೇಲ್ದರ್ಜೆಗೇರಿಸುವ ಉದ್ದೇಶ ಹೊಂದಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಂದ್ರ ಜಲ್ದಾರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT