ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಪ್ರತಿ ಶನಿವಾರ ಬಿಎಲ್‌ಒ ಸಭೆ: ಡಿಸಿ

Last Updated 12 ಸೆಪ್ಟೆಂಬರ್ 2019, 15:19 IST
ಅಕ್ಷರ ಗಾತ್ರ

ರಾಯಚೂರು: ಸಮಗ್ರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯ ಸೆಪ್ಟೆಂಬರ್‌ 30ರವರೆಗೆ ನಡೆಯಲಿದ್ದು, ಪರಿಣಾಮಕಾರಿಯಾಗಿಸಲು ಪ್ರತಿ ಶನಿವಾರ ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್‌ ಕಚೇರಿಯಲ್ಲಿ ಬಿಎಲ್‌ಒಗಳ ಸಭೆ ನಡೆಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ ಹೇಳಿದರು.

ಜಿಲ್ಲಾಡಳಿತ ಕಚೇರಿಯ ಸಭಾಂಗಣದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಸಂಬಂಧ ಜಿಲ್ಲೆಯ ರಾಜಕೀಯ ಪಕ್ಷಗಳೊಂದಿಗೆ ಗುರುವಾರ ಆಯೋಜಿಸಿದ್ದ ಮತದಾರರ ಪರಿಶೀಲನಾ ಕಾರ್ಯ ಕುರಿತ ಸಭೆಯಲ್ಲಿ ಮಾತನಾಡಿದರು.

ಬಿಎಲ್‌ಒಗಳು ಮನೆ ಮನೆಗೆ ಭೇಟಿ ನೀಡಲಿದ್ದು, ಹೊಸ ಸೇರ್ಪಡೆಗೆ ಸಂಬಂಧಿಸಿ ನಿರ್ದೇಶನ ನೀಡಲಾಗಿದೆ. ತಿದ್ದುಪಡಿಗೆ ನಮೂನೆ 8, ಸ್ಥಳ ಬದಲಾವಣೆ ಅಥವಾ ಪಟ್ಟಿಯಿಂದ ಹೆಸರು ತೆಗೆಯಲು ನಮೂನೆ 7 ಹಾಗೂ ಸೇರ್ಪಡೆಗೆ ನಮೂನೆ 6ರಲ್ಲಿ ಅರ್ಜಿ ಸಲ್ಲಿಸಬಹುದು ಎಂದರು.

ಇದೇ ಸಂದರ್ಭದಲ್ಲಿ 2019ರ ಲೋಕಸಭಾ ಚುನಾವಣೆಯ ಕಾರ್ಯಕ್ಕೆ ಉಪಯೋಗಿಸಿದ್ದ ಎಂ–2 ಇವಿಎಂ ಯಂತ್ರಗಳನ್ನು ತಮಿಳುನಾಡಿಗೆ ಕಳುಹಿಸುವ ಸಂಬಂಧ ಇವಿಎಂ ಯಂತ್ರಗಳ ಮೊಬೈಲ್ ಆಫ್‌ ಕಾರ್ಯವನ್ನು ರಾಜಕೀಯ ಪಕ್ಷಗಳ ಮುಖಂಡರ ಸಮ್ಮುಖದಲ್ಲಿ ನೆರವೇರಿಸಲಾಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜೆಡಿಎಸ್‌ ಜಿಲ್ಲಾ ಅಧ್ಯಕ್ಷ ವಿರುಪಾಕ್ಷಿ, ಭಾರತೀಯ ಜನತಾ ಪಕ್ಷದ ಜಿಲ್ಲಾ ಅಧ್ಯಕ್ಷ ಶರಣಪ್ಪ ಗೌಡ, ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹನುಮಂತ, ವಿಶ್ವನಾಥ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT