ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿ: ಜಿಲ್ಲಾಧಿಕಾರಿ ದುರುಗೇಶ

Last Updated 7 ಜನವರಿ 2020, 15:31 IST
ಅಕ್ಷರ ಗಾತ್ರ

ರಾಯಚೂರು: ಮತದಾರರ ಪಟ್ಟಿಯಲ್ಲಿ 18 ವರ್ಷ ತುಂಬಿದ ಯುವಕ, ಯುವತಿಯರು ಕಡ್ಡಾಯವಾಗಿ ಹೆಸರು ಸೇರ್ಪಡೆ ಮಾಡಿಕೊಳ್ಳುವಂತೆ ಜನರಲ್ಲಿ ಹೆಚ್ಚು ಜಾಗೃತಿ ಮೂಡಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ದುರುಗೇಶ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಸೋಮವಾರ ಹಮ್ಮಿಕೊಂಡಿದ್ದ ಮಿಂಚಿನ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಜನವರಿ 1, 2020ಕ್ಕೆ 18ವರ್ಷ ತುಂಬಿದ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಕೊಂಡು ಚುನಾವಣೆ ಸಂದರ್ಭದಲ್ಲಿ ಹಕ್ಕು ಚಲಾಯಿಸುವ ಅವಕಾಶ ಪಡೆದುಕೊಳ್ಳಬೇಕು. ಭಾರತ ಚುನಾವಣೆ ಆಯೋಗದ ನಿದರ್ಶನದಂತೆ ದೇಶದಾದ್ಯಂತ ಮಿಂಚಿನ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಯುವಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಸಮೀಪದ ತಹಶೀಲ್ದಾರ್‌ ಕಚೇರಿಯಲ್ಲಿ ಫಾರಂ ಸಂಖ್ಯೆ 6 ಪಡೆದುಕೊಂಡು ಎಲ್ಲಾ ಅಗತ್ಯ ದಾಖಲಾತಿ ಲಗತ್ತಿಸಿ, ಭರ್ತಿಮಾಡಿ ಆಯಾ ಸಂಬಂಧಿಸಿದ ತಹಶೀಲ್ದಾರ್‌, ಬಿಎಲ್‌ಓಗಳಿಗೆ ನೀಡಬೇಕು. ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್‌ ಮತ್ತು ಹೋಬಳಿ ವ್ಯಾಪ್ತಿಯಲ್ಲಿ ಬಿಎಲ್‌ಓಗಳಿಗೆ ಅರ್ಜಿ ಭರ್ತಿ ಮಾಡಿ ಸಲ್ಲಿಸಬೇಕು. ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಡಿಡಿಪಿಐ ಮತ್ತು ಡಿಡಿಪಿಯು ಅಧಿಕಾರಿಗಳು ಶಾಲೆ, ಕಾಲೇಜುಗಳಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಯುವಕರು ಮತದಾರರು ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಕೊಂಡು ಅತಿ ಹೆಚ್ಚು ಯುವ ಮತದಾರರು ಇರುವ ಜಿಲ್ಲೆ ಎನಿಸಿಕೊಳ್ಳಬೇಕು. ಈ ಅಭಿಯಾನವು ಇಂದಿನಿಂದ ಜನವರಿ 8 ರವರೆಗೆ ನಡೆಯಲಿದೆ. ಈ ವೇಳೆ ಮಿಂಚಿನ ನೋಂದಣಿ ಅಭಿಯಾನದ ಪೋಸ್ಟರ್ ಬಿಡುಗಡೆ ಮಾಡಲಾಯಿತು.

ಐಎಎಸ್ ಅಧಿಕಾರಿ ಯತೀಶ ಕುಮಾರ್, ತರಬೇತಿದಾರ ಸದಾಶಿವಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT