ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು | ಮಂತ್ರಾಲಯದ ಸುಬುಧೇಂದ್ರ ತೀರ್ಥರಿಂದ ಮತದಾನ

ಆಂಧ್ರಪ್ರದೇಶದಲ್ಲಿ ಲೋಕಸಭಾ, ವಿಧಾನಸಭಾ ಚುನಾವಣೆ
Published 13 ಮೇ 2024, 15:38 IST
Last Updated 13 ಮೇ 2024, 15:38 IST
ಅಕ್ಷರ ಗಾತ್ರ

ರಾಯಚೂರು: ಆಂಧ್ರಪ್ರದೇಶ ರಾಜ್ಯದಲ್ಲಿ ಸೋಮವಾರ ನಡೆದ ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆ ಪ್ರಯುಕ್ತ ಮಂತ್ರಾಲಯದ ಎಂಪಿಪಿ ಪ್ರಾಥಮಿಕ ಶಾಲೆಯಲ್ಲಿ ಶ್ರೀರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಮತದಾನ ಮಾಡಿದರು.

ನಂತರ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಹಕ್ಕಾಗಿರುವ ಮತ ಹಕ್ಕನ್ನು ತಪ್ಪದೇ ಚಲಾಯಿಸಬೇಕು. ಆ ಮೂಲಕ ತಮ್ಮ ದೇಶಪ್ರೇಮವನ್ನು ಪ್ರದರ್ಶಿಸಬೇಕು ಮತ್ತು ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಬಲಪಡಿಸಬೇಕು ಎಂದು ಸಲಹೆ ನೀಡಿದರು.

ಮಠದ ವ್ಯವಸ್ಥಾಪಕ ಎಸ್.ಕೆ.ಶ್ರೀನಿವಾಸರಾವ್, ಮಠದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT