ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಾನ್ವಿಯಲ್ಲಿ 276 ಮತಗಟ್ಟೆಗಳಲ್ಲಿ ಮತದಾನ

Published 4 ಏಪ್ರಿಲ್ 2024, 15:14 IST
Last Updated 4 ಏಪ್ರಿಲ್ 2024, 15:14 IST
ಅಕ್ಷರ ಗಾತ್ರ

ಮಾನ್ವಿ: ’ಮಾನ್ವಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಲೋಕಸಭಾ ಚುನಾವಣೆಯ ಸಿದ್ಧತೆ ಮಾಡಿಕೊಳ್ಳಲಾಗಿದೆ' ಎಂದು ಸಹಾಯಕ ಚುನಾವಣಾಧಿಕಾರಿ ಪ್ರಕಾಶ ಡಿ ಹೇಳಿದರು.

ಗುರುವಾರ ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.

’ಏ.8ರಂದು ಮಾನ್ವಿ ಪಟ್ಟಣದ ಕಾಕತೀಯ ಶಾಲೆಯಲ್ಲಿ ಚುನಾವಣಾ ಸಿಬ್ಬಂದಿಗೆ ಮೊದಲ ಹಂತದ ತರಬೇತಿ ಹಮ್ಮಿಕೊಳ್ಳಲಾಗಿದೆ. ಸೆಕ್ಟರ್ ಅಧಿಕಾರಿಗಳು ಈಗಾಗಲೇ ಮಾನ್ವಿ ಹಾಗೂ ಸಿರವಾರ ತಾಲ್ಲೂಕಿನ ಒಟ್ಟು 276 ಮತಗಟ್ಟೆಗಳಿಗೆ ಭೇಟಿ ನೀಡಿ ಅಲ್ಲಿನ ಮೂಲಸೌಕರ್ಯ ಕುರಿತು ವರದಿ ನೀಡಿದ್ದಾರೆ. ಮೂಲಸೌಕರ್ಯ ಕೊರತೆ ಇರುವ ಕಡೆ ಅಗತ್ಯ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು' ಎಂದರು.

ಸಿರವಾರ ಪಟ್ಟಣದ ದೇವದುರ್ಗ ಕ್ರಾಸ್ ಬಳಿ ಚೆಕ್ ಪೋಸ್ಟ್ ಸ್ಥಾಪಿಸಲಾಗಿದೆ. ಅಕ್ರಮವಾಗಿ ಹಣ, ವಸ್ತುಗಳು ಹಾಗೂ ಮದ್ಯ ಸಾಗಾಣಿಕೆ ತಡೆಗಟ್ಟಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಚುನಾವಣಾ ನೀತಿಸಂಹಿತೆಯ ಪಾಲನೆಗೆ ಗಮನಹರಿಸಲು ಚುನಾವಣಾ ಸಿಬ್ಬಂದಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.

’85ವರ್ಷದವರು ಹಾಗೂ ಅಂಗವಿಕಲ ಮತದಾರರು ತಮ್ಮ ಮನೆಗಳಲ್ಲಿ ಮತ ಚಲಾಯಿಸಲು ಅವಕಾಶ ನೀಡಲಾಗುವುದು. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೂ ಅವಕಾಶ ನೀಡಲಾಗಿದೆ' ಎಂದರು. ತಹಶೀಲ್ದಾರ್ ಜಗದೀಶ ಚೌರ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT