ಬುಧವಾರ, ಜುಲೈ 6, 2022
22 °C

‘ಮತದಾನವು ದೇಶದ ಪ್ರಜೆಗಳ ಅಸ್ತ್ರ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಪ್ರಜಾಪ್ರಭುತ್ವದ ಮೂಲ ಶಕ್ತಿ ಮತದಾನ. ಮತದಾನವು ದೇಶದ ಸಂವಿಧಾನ ಪ್ರಜೆಗಳಿಗೆ ನೀಡಿದ ಅಸ್ತ್ರವಾಗಿದೆ ಎಂದು ಸೀತಾ ಸುಬ್ಬರಾಜು ಸ್ಮಾರಕ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಸಿದ್ಧಲಿಂಗಪ್ಪ ಪಾಟೀಲ  ಹೇಳಿದರು .

ನಗರದ ಟಾಗೋರ ಸ್ಮಾರಕ ಶಿಕ್ಷಣ ಸಂಸ್ಥೆಯ ಸೀತಾ ಸುಬ್ಬರಾಜು ಸ್ಮಾರಕ ಮಹಾವಿದ್ಯಾಲಯದಲ್ಲಿ ಶುಕ್ರವಾರ ಏರ್ಪಡಿಸಿದ್ದ ರಾಷ್ಟ್ರೀಯ ಮತದಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

2020 ನೇ ವರ್ಷಕ್ಕೆ ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಕನಸಿನಂತೆ ಭಾರತವು ವಿಶ್ವದ ಯಜಮಾನಿಕೆಯ ಸ್ಥಾನವನ್ನು ಅಲಂಕರಿಸಬೇಕಾಗಿದೆ. ಜಾತಿ, ಧರ್ಮ ,ಹಣಕ್ಕಿಂತ  ಹೆಚ್ಚಾಗಿ ದೇಶದ ಪ್ರಜಾಪ್ರಭುತ್ವವನ್ನು ಸುಭದ್ರಗೊಳಿಸಬೇಕಾಗಿದೆ. ಅದಕ್ಕಾಗಿ ತಾಲ್ಲೂಕು, ಜಿಲ್ಲೆ, ರಾಜ್ಯ, ಮತ್ತು ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ಯೋಗ್ಯತೆಯುಳ್ಳವರಿಗೆ ಮತದಾನ ಮಾಡಬೇಕು ಎಂದರು.

ಯಾವುದೇ ಭಯ ಮತ್ತು ಆಮಿಷಕ್ಕೆ  ಒಳಗಾಗದೆ ಜಾತ್ಯತೀತವಾಗಿ, ಪಕ್ಷಾತೀತವಾಗಿ, ಧರ್ಮಾತೀತವಾಗಿ ಮತ ನೀಡುವ ಮೂಲಕ ಮತದಾನದ ಹಕ್ಕನ್ನು ಚಲಾಯಿಸಿ, ಚುನಾವಣೆಯಲ್ಲಿ ಶಾಂತಿಯುತವಾಗಿ ಪಾಲ್ಗೊಂಡು ಅದರ  ಘನತೆಯನ್ನು  ಎತ್ತಿ ಹಿಡಿಯಬೇಕು ಹಾಗೂ ಮತದಾನದ ಜಾಗೃತಿಯನ್ನು ಜನರಲ್ಲಿ  ಮೂಡಿಸಬೇಕು ಎಂದು ಕರೆ ನೀಡಿದರು.

ಪ್ರಾಚಾರ್ಯ ಡಾ.ಸಿದ್ದಲಿಂಗಪ್ಪ ಪಾಟೀಲ ಅವರು ಪ್ರತಿಜ್ಞಾ ವಿಧಿಯನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರು. 

ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಶ್ರೀನಿವಾಸ ರಾಯಚೂರುಕರ್‌ ನಿರೂಪಿಸಿದರು. ವಿದ್ಯಾರ್ಥಿ ಸಲ್ಮಾನ್ ಸ್ವಾಗತಿಸಿದರು. ವಿದ್ಯಾರ್ಥಿನಿ ಸರಳಾ ವಂದಿಸಿದರು.

ಮಹಾವಿದ್ಯಾಲಯದ ಸಹ ಪ್ರಾದ್ಯಾಪಕ ಬಸವರಾಜಪ್ಪ, ಉಪನ್ಯಾಸಕರಾದ ಡಾ. ಮಂಜುಳಾ ಪಾಟೀಲ, ಡಾ.ಸುವರ್ಣ ಮಶ್ಯಾಳ, ಅಳ್ಳಪ್ಪ, ಕೆ. ಬಸವರಾಜ್, ವಿಜಯಕುಮಾರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು