ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹರ್ಷಿ ವಾಲ್ಮೀಕಿ ಪುತ್ಥಳಿ ಸ್ಥಾಪಿಸಲು ಹೈದರಾಬಾದ್ ಕರ್ನಾಟಕ ವಾಲ್ಮೀಕಿ ನಾಯಕ ಸಂಘ ಮನವಿ

Published 17 ಜುಲೈ 2023, 12:44 IST
Last Updated 17 ಜುಲೈ 2023, 12:44 IST
ಅಕ್ಷರ ಗಾತ್ರ

ಮಾನ್ವಿ: ಪಟ್ಟಣದ ಮಹರ್ಷಿ ವಾಲ್ಮೀಕಿ ವೃತ್ತದಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿ ಸ್ಥಾಪನೆಗೆ ಒತ್ತಾಯಿಸಿ ಹೈದರಾಬಾದ್ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕ ಸಂಘದ ಪದಾಧಿಕಾರಿಗಳು ಸೋಮವಾರ ಪುರಸಭೆಯ ಮುಖ್ಯಾಧಿಕಾರಿಗೆ ಮನವಿಪತ್ರ ಸಲ್ಲಿಸಿದರು.

ಪುರಸಭೆಯ ಅನುದಾನದಲ್ಲಿ ಮಹರ್ಷಿ ವಾಲ್ಮೀಕಿಯ 5 ಅಡಿ ಎತ್ತರದ ಕಂಚಿನ ಪುತ್ಥಳಿ ಸ್ಥಾಪಿಸಬೇಕು. ಈಗಿನ ಸಣ್ಣ ಪುತ್ಥಳಿಯ ಪಕ್ಕದಲ್ಲಿರುವ ಖಾಲಿ ಜಾಗದಲ್ಲಿ ಸಣ್ಣ ಉದ್ಯಾನ ನಿರ್ಮಿಸಬೇಕು. ಈ ಕುರಿತು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಕ್ರಿಯಾಯೋಜನೆಗೆ ಅನುಮತಿ ಪಡೆದು ಅಗತ್ಯ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಲಾಯಿತು.

ಪುರಸಭೆಯ ಮುಖ್ಯಾಧಿಕಾರಿ ಅನುಪಸ್ಥಿತಿಯಲ್ಲಿ ವ್ಯವಸ್ಥಾಪಕ ಈರಣ್ಣ ಅವರು ಮನವಿಪತ್ರ ಸ್ವೀಕರಿಸಿದರು.

ಹೈದರಾಬಾದ್ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕ ಸಂಘದ ವಿಭಾಗೀಯ ಸಂಘಟನಾ ಕಾರ್ಯದರ್ಶಿ ಬುಡ್ಡಪ್ಪ ನಾಯಕ ಮಲ್ಲಿನಮಡುಗು, ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಬಿ. ನಾಯಕ ಉದ್ಬಾಳ, ಇತರ ಪದಾಧಿಕಾರಿಗಳಾದ ಆಂಜನೇಯ ನಾಯಕ ಮದ್ಲಾಪುರ, ಮಹಾಂತೇಶ ನಾಯಕ, ವಿಜಯ ನಾಯಕ, ರಮೇಶ ನಾಯಕ, ವೆಂಕಟೇಶ ನಾಯಕ, ಬಸನಗೌಡ ಮುದ್ದಂಗುಡ್ಡಿ, ಬಸವರಾಜ ಯಡಿವಾಳ, ವೀರೇಶ ನಾಯಕ ಭೋಗಾವತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT