ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ನೀರು ಬಳಸುವಂತಿಲ್ಲ: ಮಂಜುನಾಥ ಗುಂಡೂರು

Published 29 ಮೇ 2024, 15:51 IST
Last Updated 29 ಮೇ 2024, 15:51 IST
ಅಕ್ಷರ ಗಾತ್ರ

ಸಿಂಧನೂರು: ‘ಕಟ್ಟಡ ಕಾಮಗಾರಿಗೆ ಕುಡಿಯುವ ನೀರು ಬಳಸುವಂತಿಲ್ಲ’ ಎಂದು ನಗರಸಭೆ ಪೌರಾಯುಕ್ತ ಮಂಜುನಾಥ ಗುಂಡೂರು ತಿಳಿಸಿದ್ದಾರೆ.

ಬುಧವಾರ ಹೇಳಿಕೆ ನೀಡಿರುವ ಅವರು,‘ಕಟ್ಟಡ ನಿರ್ಮಾಣ ಕೆಲಸಗಳಿಗೆ ನೀರನ್ನು ಬಳಸಿದ ಪ್ರಕರಣಗಳು ಕಂಡುಬಂದಲ್ಲಿ ಅಂಥ ಕಟ್ಟಡಗಳ ಮಾಲೀಕರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಕುಡಿಯುವ ನೀರನ್ನು ಮಿತವಾಗಿ ಬಳಸಬೇಕು. ಆರೋಗ್ಯದ ದೃಷ್ಟಿಯಿಂದ ನಗರಸಭೆಯಿಂದ ಸರಬರಾಜು ಮಾಡುವ ನೀರನ್ನು ಕಾಯಿಸಿ, ಆರಿಸಿ ಹಾಗೂ ಸೋಸಿ ಕುಡಿಯಬೇಕು’ ಎಂದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT