ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಲಧಾರೆ: ರಾಯಚೂರಿನ 1,406 ಗ್ರಾಮಗಳಿಗೆ ನೀರು

ನಾರಾಯಣಪುರ ಜಲಾಶಯದಿಂದ ನೀರು ಬಳಕೆ: ಸಿಇಒ ಲಕ್ಷ್ಮೀಕಾಂತ ರೆಡ್ಡಿ
Last Updated 26 ಸೆಪ್ಟೆಂಬರ್ 2020, 2:29 IST
ಅಕ್ಷರ ಗಾತ್ರ

ಪ್ರಜಾವಾಣಿ ವಾರ್ತೆ

ರಾಯಚೂರು: ಜಿಲ್ಲೆಯಲ್ಲಿ ಜಲಧಾರೆ ಕುಡಿಯುವ ನೀರಿನ ಯೋಜನೆ ಕೈಗೆತ್ತಿಕೊಳ್ಳಲಾಗಿದ್ದು, ಯೋಜನೆಯಡಿ 1,406 ಗ್ರಾಮಗಳಲ್ಲಿನ ಪ್ರತಿಯೊಬ್ಬರಿಗೆ ನಿತ್ಯ 55 ಲೀಟರ್ ನೀರು ಪೂರೈಕೆ ಮಾಡಬಹುದು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಜಿ.ಲಕ್ಷ್ಮೀಕಾಂತ ರೆಡ್ಡಿ ಅವರು ತಿಳಿಸಿದರು.

ಅವರು ಶುಕ್ರವಾರ ಕಚೇರಿಯಲ್ಲಿ ಜಲಧಾರೆ ಯೋಜನೆಯ ಸಮಾಲೋಚ ಕರೊಂದಿಗೆ ಜೋಮ್ ವಿಡಿಯೊ ಸಂವಾದದಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಸಮಗ್ರ ಕುಡಿಯುವ ನೀರು ಯೋಜನೆಯಾದ ಜಲಧಾರೆಯನ್ನು ರಾಜ್ಯ ಸರ್ಕಾರ ಯೋಜನೆ ಕೈಗೆತ್ತಿ ಕೊಂಡಿದ್ದು, ಒಟ್ಟು 159.50 ಎಂಎಲ್‍ಡಿ (2.06) ಟಿಎಂಸಿ ನೀರನ್ನು ನಾರಾಯಣಪುರ ಜಲಾಶಯದಿಂದ ಪಡೆಯಲಾಗುವುದು ಎಂದರು.

ಸಂವಾದದಲ್ಲಿ ಜಲಾಧಾರೆ ಯೋಜನೆಯ ಸಮಾಲೋಚಕರಿಗೆ ಕೆಲವೊಂದು ಅಂಶಗಳನ್ನು ಮರು ಪರಿಶೀಲಿಸುವಂತೆ ಸೂಚಿಸಿದರು.

ಸರ್ಕಾರದ ಅನುಮೋದನೆಗಾಗಿ ಸಲ್ಲಿಸಲು ಸಮಿತಿಯಲ್ಲಿದ್ದ ಸರ್ವ ಸದಸ್ಯರ ಒಪ್ಪಿಗೆ ಪಡೆಯಲಾಯಿತು.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ರಾಮಕೃಷ್ಣ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಅಧಿಕಾರಿ ಗಣಪತಿ ಸಾಕ್ರೆ ಇತರೆ ಇಲಾಖೆಯ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT