ಶನಿವಾರ, ಮೇ 21, 2022
19 °C

ಬೆಳೆಗೆ ನೀರು, ಆತಂಕ ಬೇಡ: ಕೆ.ಶಿವನಗೌಡ ನಾಯಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೇವದುರ್ಗ: ‘ನಾರಾಯಣಪುರ ಬಲದಂಡೆ ಕಾಲುವೆ ವ್ಯಾಪ್ತಿಯ ಜಿಲ್ಲೆಯ ರೈತರು ಆತಂಕಕ್ಕೆ ಒಳಗಾಗುವುದು ಬೇಡ. ಜಮೀನುಗಳಿಗೆ ನೀರು ಕೊಡಿಸುವ ಜವಾಬ್ದಾರಿ ನನ್ನದು’ ಎಂದು ಶಾಸಕ ಕೆ.ಶಿವನಗೌಡ ನಾಯಕ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಜಿಲ್ಲೆಯಲ್ಲಿ ರುವ ನಾರಾಯಣಪುರ ಬಲದಂಡೆ ಕಾಲುವೆ ವ್ಯಾಪ್ತಿಯ ರೈತರು, ಜಮೀನುಗಳಿಗೆ ಸಮರ್ಪಕವಾಗಿ ನೀರು ಲಭ್ಯವಾಗುವುದಿಲ್ಲ ಎಂದು ಗೊಂದಲದಲ್ಲಿದ್ದಾರೆ. ಗೊಂದಲಗಳಿಗೆ ಕಿವಿಗೊಡಬೇಡಿ, ತಮ್ಮ ಜಮೀನುಗಳಿಗೆ ಹೆಚ್ಚು ನೀರು ಹರಿಸುವ ಜವಾಬ್ದಾರಿ ನನ್ನದು. ಈಗಾಗಲೇ ಸರ್ಕಾರ ಕೈಗೊಂಡಿರುವ ತೀರ್ಮಾನಕ್ಕಿಂತ 8-10 ದಿನಗಳ ಕಾಲ ಹೆಚ್ಚಿನ ಅವಧಿಗೆ ಹಿಂಗಾರು ಹಂಗಾಮಿನ ಬೆಳೆಗಳಿಗೆ ನೀರು ಬಿಡಲಾಗುವುದು ಎಂದು ಇಲಾಖೆಯ ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು