ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಚ್ಚುಕಟ್ಟು ಪ್ರದೇಶದ ಜಮೀನಿಗೆ ಇಂದಿನಿಂದ ನೀರು

ಮಸ್ಕಿ ಜಲಾಶಯ‌ದ ನೀರಾವರಿ ಸಲಹಾ ಸಮಿತಿ ಸಭೆ ನಿರ್ಣಯ
Last Updated 10 ಆಗಸ್ಟ್ 2021, 10:54 IST
ಅಕ್ಷರ ಗಾತ್ರ

ಮಸ್ಕಿ: ಮಸ್ಕಿ ಜಲಾಶಯದ ಅಚ್ಚುಕಟ್ಟು ಪ್ರದೇಶದ ಕೃಷಿ ಭೂಮಿಗೆ ಬುಧವಾರ ಬೆಳಿಗ್ಗೆಯಿಂದಲೇ ನೀರು ಬಿಡಲು ನಿರ್ಣಯಿಸಲಾಗಿದೆ ಎಂದು ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರೂ ಆಗಿರುವ ಸಹಾಯಕ ಆಯುಕ್ತ ರಾಹುಲ್ ಸಂಕನೂರು ತಿಳಿಸಿದರು.

ತಾಲ್ಲೂಕಿನ ಮಾರಲದಿನ್ನಿ ಬಳಿಯ ಮಸ್ಕಿ ಜಲಾಶಯ ಸ್ಥಳದಲ್ಲಿ ಮಂಗಳವಾರ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿ, ಜಲಾಶಯದಲ್ಲಿ ಸಧ್ಯ 0.478 ಟಿಎಂಸಿ ನೀರು ಬಳಕಗೆ ಸಂಗ್ರಹವಿದ್ದು, ಎಡ ಹಾಗೂ ಬಲದಂಡೆ ಕಾಲುವೆ ಮೂಲಕ ನ. 13 ರ ವರೆಗೆ ಎಡ ಹಾಗೂ ಬಲದಂಡೆ ಕಾಲುವೆಯ ಮೂಲಕ ರೈತರ ಕೃಷಿ ಚಟುವಟಿಕೆಗೆ ನೀರು ಪೂರೈಕೆ ಮಾಡಲಾಗುವುದು, ರೈತರು ನೀರನ್ನು ವ್ಯರ್ಥ ಹಾಳು ಮಾಡದೆ ಮಿತವಾಗಿ ಬಳಸಬೇಕು ಎಂದರು

ಸಭೆಯಲ್ಲಿ ಪಾಲ್ಗೊಂಡಿದ್ದ ಶಾಸಕ ಆರ್. ಬಸನಗೌಡ ಮಾತನಾಡಿ, ಕೆಲವೆಡೆ ನೀರು ಪೂರೈಸುವ ವಿತರಣಾ ಕಾಲುವೆಗಳು ಹಾಳಾಗಿದ್ದರಿಂದ ರೈತರಿಗೆ ಸಮರ್ಪಕವಾಗಿ ನೀರು ದೊರೆಯುತ್ತಿಲ್ಲ. ನೀರಾವರಿ ನಿಗಮದ ಅಧಿಕಾರಿಗಳು ಹಾಳಾದ ಕಾಲುವೆಗಳ ದುರಸ್ತಿ ಕ್ರಮ ಕೈಗೊಳ್ಳಬೇಕು. ಇದರಿಂದ ನೀರಿಗಾಗಿ ರೈತ ರೈತರ ನಡುವೆ ಮನಸ್ತಾಪ ಉಂಟಾಗುವುದಿಲ್ಲ. ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕು ಎಂದರು.

ನೀರಾವರಿ ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಾಶ ರಾವ್, ತಹಶೀಲ್ದಾರ್ ಕವಿತಾ ಆರ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಶಿವಣ್ಣ ನಾಯಕ, ಯೋಜನೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ದಾವುದ್ ಸಾಬ, ಸಬ್ ಇನ್‌ಸ್ಪೆಕ್ಟರ್ ಭೀಮದಾಸ್ ಸೇರಿದಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಯೋಜನೆ ವ್ಯಾಪ್ತಿಯ ರೈತರು ಸಭೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT