ಕವಿತಾಳ: ಸಿರವಾರ ತಾಲ್ಲೂಕಿನ ಹಿರೇಬಾದರದಿನ್ನಿ ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಕೈಗೊಂಡ ಕಾಮಗಾರಿ ಕಳಪೆಮಟ್ಟದಿಂದ ಕೂಡಿದ್ದು, ಸಂಬಂಧಪಟ್ಟ ಗುತ್ತಿಗೆದಾರರು ಮತ್ತು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ಮುಖಂಡರು ಆಗ್ರಹಿಸಿದ್ದಾರೆ.

ಈ ಕುರಿತು ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ಬರೆದ ಮನವಿ ಪತ್ರವನ್ನು ಈಚೆಗೆ ರಾಯಚೂರಿನ ಜಿಲ್ಲಾ ಪಂಚಾಯಿತಿ ಕಾರ್ಯದರ್ಶಿ ಶಶಿಕಾಂತ ಶಿವಪುರೆ ಅವರಿಗೆ ಸಲ್ಲಿಸಿದ್ದಾರೆ.

ಅಂದಾಜು ₹ 43 ಲಕ್ಷ ಮೊತ್ತದ ಕಾಮಗಾರಿ ಕೈಗೊಂಡಿದ್ದು, ವರದಿಯಂತೆ ಕೆಲಸ ನಡೆಯುತ್ತಿಲ್ಲ. ಕುಡಿಯುವ ನೀರು ಸರಬರಾಜು ಮಾಡುವ ಹಳೇ ಪೈಪ್ಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದು ಸರ್ಕಾರದ ನಿಯಮಗಳನ್ನು ಪಾಲಿಸುತ್ತಿಲ್ಲ. ಸಂಬಂಧಪಟ್ಟ ಎಂಜಿನಿಯರ್ ಮತ್ತು ಗುತ್ತಿಗೆದಾರರು ಸ್ಥಳಕ್ಕೆ ಬಾರದೆ ಉಪ ಗುತ್ತಿಗೆದಾರರು ಕಾಮಗಾರಿ ನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಸಮಿತಿಯ ಹೋಬಳಿ ಘಟಕದ ಅಧ್ಯಕ್ಷ ಅಮರೇಶ ಹಿರೇಬಾದರದಿನ್ನಿ, ಎಸ್.ಶಿವರಾಜ ಮತ್ತು ಬಿ.ಯಮನಪ್ಪ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.