ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕರ್ನಾಟಕಕ್ಕಾಗಿ ನಾವು’ ಬೈಕ್ ರ‍್ಯಾಲಿ ನಾಳೆ ಸಿಂಧನೂರಿಗೆ

Published 26 ಫೆಬ್ರುವರಿ 2024, 13:55 IST
Last Updated 26 ಫೆಬ್ರುವರಿ 2024, 13:55 IST
ಅಕ್ಷರ ಗಾತ್ರ

ಸಿಂಧನೂರು: ಕೆಆರ್‌ಎಸ್ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರವಿಕೃಷ್ಣಾರೆಡ್ಡಿ ನೇತೃತ್ವದಲ್ಲಿ ನಡೆಯುತ್ತಿರುವ ‘ಕರ್ನಾಟಕಕ್ಕಾಗಿ ನಾವು’ ಬೈಕ್ ರ‍್ಯಾಲಿ ಫೆ.27 ರಂದು ಸಿಂಧನೂರು ನಗರಕ್ಕೆ ಆಗಮಿಸಲಿದೆ ಎಂದು ಕೆಆರ್‌ಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿರುಪಾದಿ ಕೆ.ಗೋಮರ್ಸಿ ತಿಳಿಸಿದ್ದಾರೆ.

ಸೋಮವಾರ ಹೇಳಿಕೆ ನೀಡಿರುವ ಅವರು,‘ಫೆ.19 ರಂದು ದೇವನಹಳ್ಳಿಯಿಂದ ಆರಂಭವಾದ ಈ ರ‍್ಯಾಲಿ ಕರ್ನಾಟಕ ರಾಜ್ಯದಾದ್ಯಂತ 13 ದಿನಗಳ ಕಾಲ 3 ಸಾವಿರ ಕಿಲೋ ಮೀಟರ್ ಸಂಚರಿಸಲಿದೆ. ಫೆ.27 ರಂದು ಬೆಳಿಗ್ಗೆ 9 ಗಂಟೆಗೆ ರಾಯಚೂರು, 10.30 ಗಂಟೆಗೆ ಮಾನ್ವಿ, 11.30 ಗಂಟೆಗೆ ಸಿಂಧನೂರಿಗೆ ಬಂದು ಬಸವ ವೃತ್ತದ ಬಳಿ ಸಾರ್ವಜನಿಕರನ್ನು ಉದ್ದೇಶಿಸಿ ರಾಜ್ಯ ಘಟಕದ ಅಧ್ಯಕ್ಷ ರವಿಕೃಷ್ಣಾರೆಡ್ಡಿ ಹಾಗೂ ಪಕ್ಷದ ಪ್ರಮುಖರು ಮಾತನಾಡಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಸಿರಗುಪ್ಪ, 3 ಗಂಟೆಗೆ ಬಳ್ಳಾರಿ, ಸಂಜೆ 5 ಗಂಟೆಗೆ ಹೊಸಪೇಟೆಗೆ ತೆರಳಲಿದೆ’ ಎಂದರು.

ಭ್ರಷ್ಟ ರಾಷ್ಟ್ರೀಯ ಪಕ್ಷಗಳನ್ನು ತಿರಸ್ಕರಿಸಿ ಪ್ರಾಮಾಣಿಕ, ಪ್ರಾದೇಶಿಕ ಕೆಆರ್‌ಎಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಜನ ಜಾಗೃತಿ ಮೂಡಿಸಲಾಗುತ್ತಿದೆ. ಮಾರ್ಚ್ 2 ರಂದು ಬೆಂಗಳೂರಿನ ನೆಲಮಂಗಲದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT