ಮಸ್ಕಿ: ವಾರಾಂತ್ಯದ ಕರ್ಫ್ಯೂ ಕಾರಣ ಪಟ್ಟಣದಲ್ಲಿ ಶನಿವಾರ ಎಲ್ಲ ಅಂಗಡಿ–ಮುಂಗಟ್ಟುಗಳನ್ನು ಮುಚ್ಚಲಾಗಿತ್ತು. ಬೆಳಿಗ್ಗೆ 6 ರಿಂದ 10 ಗಂಟೆಯವರೆಗೂ ಜನ ಅಗತ್ಯ ವಸ್ತುಗಳನ್ನು ಖರೀದಿಸಿದರು.

ಕಿರಾಣಿ ಅಂಗಡಿಗಳು, ಹೋಟೆಲ್ಗಳು ಸಂಪೂರ್ಣವಾಗಿ ಬಂದ್ ಆಗಿದ್ದವು. ವಾಹನ ಸಂಚಾರ ಇಲ್ಲದ ಕಾರಣ ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ರಸ್ತೆಗಳು ಬಿಕೋ ಎನ್ನುತ್ತಿದ್ದವು.

ರಸ್ತೆ ಮೇಲೆ ತಿರುಗಾಡುತ್ತಿದ್ದವರಿಗೆ ಪುರಸಭೆ ಸಿಬ್ಬಂದಿ, ಪೊಲೀಸರು ತಿಳಿಹೇಳಿ ಕಳುಹಿಸಿದರು.

ಧ್ವನಿವರ್ಧಕದ ಮೂಲಕ ಸಾರ್ವಜನಿಕರು ಮನೆಯಿಂದ ಹೊರಗೆ ಬರಬಾರದು ಎಂದು ಮನವಿ ಮಾಡಲಾಯಿತು.

‘ಮಸ್ಕಿಯಲ್ಲಿ ನಡೆಯಬೇಕಾಗಿದ್ದ ಭಾನುವಾರದ ಸಂತೆ ನಿಷೇಧಿಸಲಾಗಿದೆ’ ಎಂದು ಪುರಸಭೆ ಮುಖ್ಯಾಧಿಕಾರಿ ಹನುಮಂತಮ್ಮ ನಾಯಕ ತಿಳಿಸಿದ್ದಾರೆ.

‘ಒಂದು ವೇಳೆ ಸಂತೆ ಮಾರುಕಟ್ಟೆಯಲ್ಲಿ ಅಂಗಡಿ ಹಾಕಿದರೆ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.