ಸೋಮವಾರ, ಜೂನ್ 14, 2021
28 °C

ವಾರಾಂತ್ಯ ಕರ್ಫ್ಯೂ: ಶಕ್ತಿನಗರ ಬಂದ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಕ್ತಿನಗರ: ದೇವಸೂಗೂರು ಮತ್ತು ಚಿಕ್ಕಸೂಗೂರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ವ್ಯಾಪ್ತಿಯಲ್ಲಿ ವಾರಾಂತ್ಯ ಕರ್ಫ್ಯೂಗೆ ಉತ್ತಮ ಸ್ಪಂದನೆ ವ್ಯಕ್ತವಾಯಿತು.

ಶನಿವಾರ ಅಂಗಡಿ–ಮುಂಗಟ್ಟುಗಳು ಸಂಪೂರ್ಣವಾಗಿ ಬಂದ್ ಆಗಿದ್ದವು.

ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಔಷಧ, ತರಕಾರಿ, ಹಾಲು, ದಿನಪತ್ರಿಕೆ ಹಾಗೂ ದಿನಸಿ ಅಂಗಡಿಗಳು ತೆರೆದಿದ್ದವು. ವಿರಳ ಸಂಖ್ಯೆಯಲ್ಲಿದ್ದ ಗ್ರಾಹಕರು ವಸ್ತುಗಳನ್ನು ಖರೀದಿಸಿದರು. 10 ಗಂಟೆಯ ಬಳಿಕ ಔಷಧ ಅಂಗಡಿಗಳು ಮತ್ತು ಪೆಟ್ರೋಲ್ ಬಂಕ್ ಹೊರತುಪಡಿಸಿ ಉಳಿದೆಲ್ಲ ಅಂಗಡಿಗಳನ್ನು ಬಂದ್‌ ಮಾಡಲಾಯಿತು.

ಪ್ರಮುಖ ರಸ್ತೆ ಹಾಗೂ ಬಸ್‌ ನಿಲ್ದಾಣ ಮತ್ತು ಶಕ್ತಿನಗರದ ಒಂದನೇ ಮತ್ತು ಎರಡನೇ ಕ್ರಾಸ್‌ ರಸ್ತೆಗಳು ಜನರಿಲ್ಲದೆ ಬಿಕೋ ಎನ್ನುತ್ತಿದ್ದವು. ಅನಗತ್ಯವಾಗಿ ಬೈಕ್‌ನಲ್ಲಿ ತಿರುಗಾಡುತ್ತಿದ್ದ ಒಟ್ಟು 10 ಜನರಿಗೆ ಶಕ್ತಿನಗರ ಪೊಲೀಸರು ದಂಡ ವಿಧಿಸಿದರು. ವಾಹನ ಜಪ್ತಿ ಮಾಡಿದರು. ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಕೂಡ ಮಾಸ್ಕ್ ಧರಿಸದವರಿಗೆ ಪೊಲೀಸರು ದಂಡ ವಿಧಿಸಿದರು.

ಯಾಪಲದಿನ್ನಿ ಠಾಣಾ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದವರಿಗೆ ಮತ್ತು ಅನಗತ್ಯವಾಗಿ ಬೈಕ್‌ನಲ್ಲಿ ತಿರುಗಾಡುತ್ತಿದ್ದವರಿಗೆ ಒಟ್ಟು 16 ಜನರಿಗೆ ದಂಡ ವಿಧಿಸಿ ಪೊಲೀಸರು ಎಚ್ಚರಿಕೆ ನೀಡಿದ ಪ್ರಸಂಗ ನಡೆಯಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು