ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಂಧನೂರು: ಜ್ಯೋತಿಯಾತ್ರೆಗೆ ಭವ್ಯ ಸ್ವಾಗತ

Last Updated 18 ಜನವರಿ 2020, 10:05 IST
ಅಕ್ಷರ ಗಾತ್ರ

ಸಿಂಧನೂರು: ಶಿವಶರಣ ಮೇದಾರ ಕೇತಯ್ಯ ಹಾಗೂ ಅವರ ಪುಣ್ಯಸ್ತ್ರೀ ಸಾತವ್ವ ಅವರ ಜಯಂತ್ಯುತ್ಸವ ಅಂಗವಾಗಿ ಮೇದಾರ ಪೀಠದ ಗುರುಗಳಾದ ಇಮ್ಮಡಿ ಬಸವ ಕೇತೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಶುಕ್ರವಾರ ನಗರಕ್ಕೆ ಆಗಮಿಸಿದ ಜ್ಯೋತಿಯಾತ್ರೆಯನ್ನು ಭವ್ಯವಾಗಿ ಸ್ವಾಗತಿಸಿಕೊಳ್ಳಲಾಯಿತು.

ಸ್ಥಳೀಯ ಕೋಟೆ ಈರಣ್ಣ ಕಲ್ಯಾಣ ಮಂಟಪದ ಬಳಿ ಮೇದಾರ ಸಮಾಜದ ಮುಖಂಡರು ಹಾಗೂ ಮಹಿಳೆಯರು ಜ್ಯೋತಿಯಾತ್ರೆಗೆ ಆರತಿ ಬೆಳಗಿ ಪೂಜೆ ಸಲ್ಲಿಸುವ ಮೂಲಕಸ್ವಾಗತಿಸಿಕೊಂಡರು.

ನಂತರ ಸಾರೋಟದಲ್ಲಿ ಮೇದಾರ ಪೀಠದ ಗುರುಗಳಾದ ಇಮ್ಮಡಿ ಬಸವ ಕೇತೇಶ್ವರ ಸ್ವಾಮೀಜಿ ಅವರನ್ನು ಮೆರವಣಿಗೆ ಮೂಲಕ
ಕಿತ್ತೂರುರಾಣಿ ಚೆನ್ನಮ್ಮ ವೃತ್ತ, ಕನಕದಾಸ ವೃತ್ತ, ಮಹಾತ್ಮಗಾಂಧಿ ವೃತ್ತ,ಸುಕೋ ಬ್ಯಾಂಕ್, 40ನೇ ಕಾಲುವೆ ಮೂಲಕ ಗಂಗಾನಗರದ ಕೇತೇಶ್ವರ ಭವನಕ್ಕೆಕರೆತರಲಾಯಿತು.

ಮೆರವಣಿಗೆಯುದ್ದಕ್ಕೂ ನೂರಾರು ಮಹಿಳೆಯರು ಕಳಸ ಹಿಡಿದುಸಾಗಿದರು.

ನಂತರ ಮೇದಾರ ಪೀಠದ ಇಮ್ಮಡಿ ಬಸವ ಕೇತೇಶ್ವರ ಸ್ವಾಮೀಜಿ ಮಾತನಾಡಿ, ‘ಶಿವಶರಣ ಮೇದಾರ ಕೇತಯ್ಯನವರ ಜಯಂತ್ಯುತ್ಸವ ಅಂಗವಾಗಿ ಬೀದರ್‌ನಿಂದ ಚಿತ್ರದುರ್ಗದ ಪೀಠದವರೆಗೆ ಜ್ಯೋತಿಯಾತ್ರೆ ನಡೆಸಲಾಗುತ್ತಿದೆ. ಈ ಮೂಲಕ ಸಮಾಜದವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುತ್ತಿದೆ. ಮೇದಾರ ಸಮಾಜ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯವಾಗಿ ಮುಖ್ಯವಾಹಿನಿಗೆ ಬರಬೇಕಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಬೇಕು’ ಎಂದು ಹೇಳಿದರು.

ಮೇದಾರ ಸಮಾಜದ ಮುಖಂಡರಿದ್ದರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT