ರಾಯಚೂರು: ಪಟ್ಟಣ ಸೇರಿ ಗ್ರಾಮೀಣ ಭಾಗದ ಗ್ರಾಹಕರ ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ದಾಖಲಿಸಿ ಬಗೆಹರಿಸಲು ಜೆಸ್ಕಾಂ ವಾಟ್ಸ್‌ಆ್ಯಪ್ ಸಹಾಯವಾಣಿ ಸೇವೆ ಆರಂಭಿಸಿದೆ.
ವಾಟ್ಸ್‌ಆ್ಯಪ್ ಸಹಾಯವಾಣಿ ಸಂಖ್ಯೆ 9480847593 ಮೂಲಕ ನಿಮ್ಮ ದೂರು ದಾಖಲಿಸಿ ಪರಿಹಾರ ಪಡೆದುಕೊಳ್ಳಬಹುದಾಗಿದೆ. ಜೆಸ್ಕಾಂನ ಎಲ್ಲ ಗ್ರಾಹಕರು ಈ ಸೌಲಭ್ಯವನ್ನು ಸದುಪಯೋಗ ಪಡೆದುಕೊಳ್ಳಬಹುದು. ಅಲ್ಲದೆ, 24X7 ಸಹಾಯವಾಣಿ ಸಂಖ್ಯೆ 1912 ಕ್ಕೆ ಕರೆಮಾಡಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಜೆಸ್ಕಾಂ ಪ್ರಕಟಣೆ ತಿಳಿಸಿದೆ.