ಕಾರ್ಮಿಕರ ಶ್ರಮವಿಲ್ಲದಿದ್ದರೆ ಯಶಸ್ಸು ಸಾಧ್ಯವಿಲ್ಲ

ಸೋಮವಾರ, ಮಾರ್ಚ್ 25, 2019
24 °C
ವಿಶೇಷ ಪುರಸ್ಕಾರ ಪ್ರದಾನ ಕಾರ್ಯಕ್ರಮದಲ್ಲಿ ಜಿ.ಪಂ. ಅಧ್ಯಕ್ಷೆ ಆದಿಮನಿ ವೀರಲಕ್ಷ್ಮಿ ಹೇಳಿಕೆ

ಕಾರ್ಮಿಕರ ಶ್ರಮವಿಲ್ಲದಿದ್ದರೆ ಯಶಸ್ಸು ಸಾಧ್ಯವಿಲ್ಲ

Published:
Updated:
Prajavani

ರಾಯಚೂರು: ಕಾರ್ಮಿಕರ ಶ್ರಮದಿಂದ ಮಾತ್ರವೇ ಯಾವುದೇ ಕೆಲಸಗಳು ಯಶಸ್ವಿಯಾಗಿ ನಡೆಯಲಿದೆ. ಕಾರ್ಮಿಕರ ಶ್ರಮವಿಲ್ಲದಿದ್ದರೆ ಯಾವುದೇ ಕೆಲಸ ಯಶಸ್ವಿಯಾಗಿ ಮಾಡಲು ಸಾಧ್ಯವಿಲ್ಲ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮಿ ಹೇಳಿದರು.

ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಶುಕ್ರವಾರ ಆಯೋಜಿಸಿದ್ದ ಕಾರ್ಮಿಕರ ಸಮ್ಮಾನ ದಿನಾಚರಣೆ, ಶ್ರಮ ಸಮ್ಮಾನ ಪ್ರಶಸ್ತಿ ಮತ್ತು ವಿಶೇಷ ಪುರಸ್ಕಾರ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾರ್ಮಿಕರಿಗೆ ಪ್ರತ್ಯೇಕವಾದ ಸ್ಥಾನವಿದ್ದು, ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದ್ದು, ಯೋಜನೆಗಳ ಸದುಪಯೋಗವನ್ನು ಪ್ರತಿಯೊಬ್ಬ ಅಸಂಘಟಿತ ಕಾರ್ಮಿಕರು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಒಂದನೇ ವೃತ್ತ ಕಾರ್ಮಿಕ ನಿರೀಕ್ಷಕ ಎಲ್.ವೆಂಕಟಸ್ವಾಮಿ ಪ್ರಾಸ್ತಾವಿಕ ಮಾತನಾಡಿ, ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಕಾರ್ಮಿಕ ಇಲಾಖೆ ಶ್ರಮಿಸುತ್ತಿದ್ದು, ಕಾರ್ಮಿಕರಿಗೆ ಸಾಲವನ್ನು ನೀಡಲಾಗುತ್ತದೆ ಎಂದು ಹೇಳಿದರು.

ಕೇಂದ್ರ ಸರ್ಕಾರ 1996 ರಲ್ಲಿ ಕಟ್ಟಡ ಕಾರ್ಮಿಕರ ಸಂಘಟನೆ ರೂಪಿಸಿತ್ತು. ರಾಜ್ಯದಲ್ಲಿ ಪ್ರತ್ಯೇಕ ಕಾರ್ಮಿಕ ಸಂಘಟನೆಯನ್ನು 2006 ರಲ್ಲಿ ರೂಪಿಸಲಾಗಿದೆ. ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಲ್ಲಿ ಕ್ಷೌರಿಕರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಹಮಾಲರು, ಚಿಂದಿ ಆಯುವವರು, ಮನೆ ಕೆಲಸಗಾರು, ಚಾಲಕರು ಶ್ರಮ ಜೀವಿಗಳಾಗಿದ್ದಾರೆ ಎಂದರು.

ಇದೇ ವೇಳೆ ಶ್ರಮ ಸಮ್ಮಾನ್ ಪ್ರಶಸ್ತಿ ಹಾಗೂ ವಿಶೇಷ ಪುರಸ್ಕಾರಕ್ಕೆ ತಲಾ 10 ಜನ ಕಾರ್ಮಿಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಲೋಕಸಭಾ ಚುನಾವಣೆ ಹಿನ್ನೆಯಲೆಯಲ್ಲಿ ಕಾರ್ಮಿಕರಿಗೆ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಸಿಂಧನೂರು ಕಾರ್ಮಿಕ ಇಲಾಖೆ ನಿರೀಕ್ಷಕ ಜನಾರ್ಧನ್‍ಕುಮಾರ, ಕಾರ್ಮಿಕ ಇಲಾಖೆ ಅಧಿಕಾರಿ ಮಂಜುನಾಥರೆಡ್ಡಿ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !