ಸಿಂಧನೂರು: ಮಹಿಳೆಯರ ಸಬಲೀಕರಣದಿಂದ ಸಮಾಜದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ರಾಜೇಂದ್ರ ಕುಮಾರ ಸ್ಮಾರಕ ಶಾಲೆಯ ಆಡಳಿತಾಧಿಕಾರಿ ಸರಸ್ವತಿ ಪಾಟೀಲ ಅಭಿಪ್ರಾಯಪಟ್ಟರು.

ನಗರದ ಕುಷ್ಟಗಿ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಜ್ಞಾನ ಸಿಂಧು ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಂತರರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಲಿಂಗ ಸಮಾನತೆಯ ಮೂಲಕ ಸಮಾಜದಲ್ಲಿ ಮಹಿಳೆಯ ಸ್ಥಾನಮಾನ ಹಾಗೂ ಸಮಾನ ಅವಕಾಶಗಳನ್ನು ಕಲ್ಪಿಸಬೇಕು. ಮಹಿಳೆಯರಿಗೆ ಆಗುವ ಅನ್ಯಾಯಗಳನ್ನು ಸರಿಪಡಿಸುವುದು ಮಹತ್ವದಾಗಿದೆ. ಮಹಿಳೆಯರಿಗೆ ಎಲ್ಲ ಕ್ಷೇತ್ರದಲ್ಲಿ ಸಮಾನ ಅವಕಾಶಗಳನ್ನು ನೀಡುವುದರ ಮೂಲಕ ಮಹಿಳಾ ದಿನಾಚರಣೆ ಧ್ಯೇಯ ಈಡೇರಿಸಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರೊ.ಪಿ.ಕಣ್ಣನ್ ಮಾತನಾಡಿ, ಶತಶತಮಾನಗಳಿಂದ ಮಹಿಳೆಯರಿಗೆ ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಸಮಾನ ಅವಕಾಶ ಸ್ಥಾನ-ಮಾನಗಳು ದೊರೆಯುತ್ತಿಲ್ಲ. ಜಾಗತಿಕವಾಗಿ ಮಹಿಳೆಯರಿಗೆ ರಾಜಕೀಯ, ಸಾಮಾಜಿಕ ಧಾರ್ಮಿಕ ಕ್ಷೇತ್ರದಲ್ಲಿ ಸಮಾನ ಅವಕಾಶಗಳನ್ನು ನೀಡಬೇಕು’ ಎಂದು ಹೇಳಿದರು.

ಇಂಗ್ಲಿಷ್ ಉಪನ್ಯಾಸಕಿ ಶಶಿಕಲಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಯಶೋದಾ ನಿರೂಪಿಸಿದರು. ಭಾರ್ಗವಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.