ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲ ರಂಗದಲ್ಲೂ ಮಹಿಳೆ ಹೆಜ್ಜೆ:

Last Updated 9 ಮಾರ್ಚ್ 2022, 6:31 IST
ಅಕ್ಷರ ಗಾತ್ರ

ಸಿಂಧನೂರು: ಮಹಿಳೆಯರು ಪುರುಷರಷ್ಟೇ ಸಮಾನರಾಗಿ ಎಲ್ಲ ರಂಗಗಳಲ್ಲೂ ಹೆಜ್ಜೆಯಿಟ್ಟು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ದೀಪಾ ಜಿ.ಮನೇರಕರ್ ಹೇಳಿದರು.

ನಗರದ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹಕ್ಕುಗಳನ್ನು ಪಡೆದುಕೊಳ್ಳುವ ಮೂಲಕ ಇತರ ಮಹಿಳೆಯರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಹೇಳಿದರು.

1ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಕೋಟೆಪ್ಪ ಕಾಂಬ್ಳೆ, 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಆನಂದಪ್ಪ ಎಂ, ವಕೀಲರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಭೀಮನಗೌಡ, ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿಶೇಷಾಧಿಕಾರಿ ಡಾ.ಎಂ.ನಾಗರಾಜ ಇದ್ದರು. ಮಹಿಳೆ ಮತ್ತು ಕಾನೂನು ಕುರಿತು ಭಾಗ್ಯವತಿ, ಮಹಿಳೆ ಮತ್ತು ಆರೋಗ್ಯ ಕುರಿತು ಡಾ.ಕೆ.ಬಿಂದು ವಿಶೇಷ ಉಪನ್ಯಾಸ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT