ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನ್ವಿ | ಬೆಲೆ ಏರಿಕೆ ನಿಯಂತ್ರಿಸಲು ಒತ್ತಾಯ: ಮನವಿ ಸಲ್ಲಿಕೆ

Published 18 ಫೆಬ್ರುವರಿ 2024, 14:05 IST
Last Updated 18 ಫೆಬ್ರುವರಿ 2024, 14:05 IST
ಅಕ್ಷರ ಗಾತ್ರ

ಮಾನ್ವಿ: ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಣ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಂಯುಕ್ತ ಹೋರಾಟ- ಕರ್ನಾಟಕ ಹಾಗೂ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ ತಾಲ್ಲೂಕು ಘಟಕಗಳಿಂದ ಶುಕ್ರವಾರ ಗ್ರೇಡ್-2 ತಹಶೀಲ್ದಾರ್ ಅಬ್ದುಲ್ ವಾಹಿದ್ ಅವರಿಗೆ ಮನವಿ ಸಲ್ಲಿಸಲಾಯಿತು.

‌‘ಕೇಂದ್ರ ಸರ್ಕಾರವು ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಬೇಕು. ಸಾರ್ವಜನಿಕ ಕ್ಷೇತ್ರಗಳ ಖಾಸಗೀಕರಣ ಕೈಬಿಡಬೇಕು. ರೈಲ್ವೆ, ವಿದ್ಯುತ್ ಒಳಗೊಂಡು ಎಲ್ಲಾ ಸಾರ್ವಜನಿಕ ರಂಗದ ಕೈಗಾರಿಕೆ ಹಾಗೂ ಸೇವೆಗಳನ್ನು ಬಲಪಡಿಸಬೇಕು. ಡಾ.ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಗೆ ಕಾನೂನು ರಚಿಸಬೇಕು. ನರೇಗಾ ಕೂಲಿ ದಿನಗಳನ್ನು 200 ದಿನಗಳಿಗೆ ಹೆಚ್ಚಿಸಿ, ತಲಾ ₹600 ಕೂಲಿ ನಿಗದಿ ಮಾಡಬೇಕು’ ಎಂದು ಪ್ರಧಾನಿ ಅವರಿಗೆ ಬರೆದ ಪತ್ರದಲ್ಲಿ ಒತ್ತಾಯಿಸಲಾಗಿದೆ.

ಸಿಐಟಿಯು ಸಂಘಟನೆಯ ಅಧ್ಯಕ್ಷ ಎಚ್.ಶರ್ಪುದ್ದೀನ್ ಪೋತ್ನಾಳ, ಇತರ ಸಂಘಟನೆಗಳ ಪದಾಧಿಕಾರಿಗಳಾದ ಎಂ.ಬಿ.ಸಿದ್ರಾಮಯ್ಯ, ರುದ್ರಪ್ಪ ನಾಯಕ, ಅಬ್ರಾಹಂ ಅಮರವತಿ, ಆಂಜನೇಯ ಕೋಟೆ, ಅಂಬಣ್ಣ ನಾಯಕ, ಸಿದ್ದಲಿಂಗಯ್ಯ, ತೆರೇಸಾ ಪಟ್ಟದಕಲ್, ಲಲಿತಾ, ಚನ್ನಮ್ಮ, ಕಾಳಮ್ಮ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT