ಬುಧವಾರ, ಜನವರಿ 22, 2020
21 °C

12ರಂದು ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕಾರ್ಯಾಗಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಚಿರಾಯು ಪ್ರಕಾಶನದಿಂದ ಜನವರಿ 12 ರಂದು ಬೆಳಿಗ್ಗೆ 10 ಗಂಟೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗಲಿರುವ ಸಾಮಾನ್ಯ ಜ್ಞಾನ ಒಳಗೊಂಡಿರುವ ‘ಜ್ಞಾನಧಾರೆ’ ಪುಸ್ತಕ ಬಿಡುಗಡೆ ಹಾಗೂ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ ಮತ್ತು ಉಚಿತ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕಾರ್ಯಾಗಾರವನ್ನು ವೀರಶೈವ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಾಲ್ಮೀಕಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಯಲ್ಲಪ್ಪ ಜಾಲಿಬೆಂಚಿ ತಿಳಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಡಾ.ಶಿವರಾಜ ಪಾಟೀಲ ಪುಸ್ತಕ ಲೋಕಾರ್ಪಣೆ ಮಾಡುವರು. ಮಾಜಿ ಸಂಸದ ಬಿ.ವಿ.ನಾಯಕ ಕ್ವಿಜ್ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಸಂಸದ ರಾಜಾ ಅಮರೇಶ್ವರ ನಾಯಕ, ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕ ಆಗಮಿಸುವರು ಎಂದು ತಿಳಿಸಿದರು.

ಕೆಎಎಸ್ ಅಧಿಕಾರಿಗಳು ಸ್ಪರ್ಧಾತ್ಮಕ ಪರೀಕ್ಷೆಯ ಕುರಿತು ಮಾಹಿತಿ ನೀಡಲಿದ್ದಾರೆ. ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ನೊಂದಣಿ ಶುಲ್ಕ ₹200 ನಿಗದಿಪಡಿಸಲಾಗಿದೆ. ಕ್ವಿಜ್ ಲಿಖಿತ ರೂಪದಲ್ಲಿ ಇರುತ್ತದೆ. ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗುತ್ತಿದೆ. ಹೆಚ್ಚಿನ ಮಾಹಿತಿ ಹಾಗೂ ನೊಂದಣಿಗಾಗಿ ಬಾಲಯ್ಯ ಅವರ ಮೊಬೈಲ್‌ ಸಂಖ್ಯೆ 9591770610 ಕರೆ ಮಾಡಬಹುದು.

ಮಹಾಮತೇಶ, ರಂಗನಾಥ, ಗುರುರಾಜ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು