ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಳೆ ತಡೆಯಲು ನರೇಗಾದಲ್ಲಿ ಉದ್ಯೋಗ ಸೃಷ್ಟಿಸಿ: ಶಶಿಕಾಂತ ಶಿವಪೂರೆ

ಗ್ರಾಮಕಾಯಕ ಮಿತ್ರರಿಗೆ ಕಾರ್ಯಾಗಾರ
Last Updated 18 ಆಗಸ್ಟ್ 2021, 14:09 IST
ಅಕ್ಷರ ಗಾತ್ರ

ರಾಯಚೂರು: ರಾಯಚೂರು, ಯಾದಗಿರಿ ಜಿಲ್ಲೆಗಳ ಜನರು ಕೆಲಸಕ್ಕಾಗಿ ರಾಜಧಾನಿಗಳತ್ತ ಗುಳೆ ಹೋಗುವುದನ್ನು ತಡೆಯಲು ನರೇಗಾ ಯೋಜನೆಯಡಿಯಲ್ಲಿ ಸ್ಥಳದಲ್ಲಿಯೇ ಕಾರ್ಮಿಕರಿಗೆ ಉದ್ಯೋಗ ಸೃಷ್ಟಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶಶಿಕಾಂತ ಶಿವಪೂರೆ ಹೇಳಿದರು.

ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿಯಿಂದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕುರಿತು ಗ್ರಾಮಕಾಯಕ ಮಿತ್ರರಿಗೆ ಬುಧವಾರ ಏರ್ಪಡಿಸಿದ್ದ ಜಿಲ್ಲಾಮಟ್ಟದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ರಾಜ್ಯದಲ್ಲಿ ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳು ಅಭಿವೃದ್ಧಿಯಲ್ಲಿ ಹಿಂದುಳಿದಿರುವುದರಿಂದ ಈ ಭಾಗದಲ್ಲಿ ಬಡತನ ತಾಂಡವಾಡುತ್ತಿದೆ. ಜನರು ತಮ್ಮ ಕುಟುಂಬ ಪೋಷಣೆ ಮಾಡುವುದಕ್ಕೆ ಬೆಂಗಳೂರು, ಹೈದರಾಬಾದ್ ಹಾಗೂ ಮುಂಬೈಯಂತಹ ದೊಡ್ಡದೊಡ್ಡ ನಗರಗಳತ್ತ ವಲಸೆ ಹೋಗುತ್ತಿದ್ದಾರೆ ಎಂದು ಹೇಳಿದರು.

ಉದ್ಯೋಗಕ್ಕಾಗಿ ಗುಳೆ ಹೋಗುವ ಜನರ ಮನವೂಲಿಸಿ ನರೇಗಾ ಯೋಜನೆಯಡಿ ಅವರು ವಾಸಮಾಡುತ್ತಿರುವ ಗ್ರಾಮಗಳಲ್ಲಿಯೇ ಗ್ರಾಮ ಪಂಚಾಯಿತಿ ವತಿಯಿಂದ ಉದ್ಯೋಗ ಸೃಷ್ಟಿಸುವುದು ಗ್ರಾಮ ಕಾಯಕ ಮಿತ್ರರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಪ್ರತಿದಿನ 299 ಕೂಲಿ ಪಾವತಿಸಲಾಗುತ್ತದೆ. ವರ್ಷದಲ್ಲಿ 100ದಿನ ಮಾನವ ದಿನಗಳನ್ನು ಸೃಜನ ಮಾಡಬಹುದು. ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಪ್ರದೇಶದಲ್ಲಿ ಶಾಲೆ, ಕಂಪೌಂಡ್‌, ಆಸ್ಪತ್ರೆ ಅಭಿವೃದ್ಧಿ, ಕುಡಿಯುವ ನೀರು ಮತ್ತು ಕೃಷಿಹೊಂಡ, ಬದುನಿರ್ಮಾಣ ಸೇರಿದಂತೆ ಇನ್ನಿತರ ಕಾಮಗಾರಿ ನಿರ್ವಹಿಸಬಹುದು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಮಡೋಳಪ್ಪ ಪಿ.ಎಸ್ ಮಾತನಾಡಿ, ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಜಾಬ್ ಕಾರ್ಡ್ ನೀಡುವುದು, ಕಾಯಕ ಬಂಧುಗಳ ಮೇಲ್ವಿಚಾರಣೆ ಮಾಡಬೇಕು. ಕಾಮಗಾರಿಗಳ ಕಡತ ಮತ್ತು ಏಳು ರಿಜಿಸ್ಟರ್ ನಿರ್ವಹಿಸಬೇಕು ಎಂದು ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಮರೆಡ್ಡಿ ಪಾಟೀಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT