ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

Last Updated 13 ಜೂನ್ 2022, 3:27 IST
ಅಕ್ಷರ ಗಾತ್ರ

ದೇವದುರ್ಗ: ಕಾರ್ಮಿಕರು ದೇಶದ ಬೆನ್ನೆಲುಬು. ಆದರೆ ಬಾಲ ಕಾರ್ಮಿಕರು ಸಮಾಜದ ಪಿಡುಗು. ಸಾರ್ವಜನಿಕರು ಪ್ರಬುದ್ಧರಾದರೆ ಮಾತ್ರ ಇಂತಹ ಪಿಡುಗನ್ನು ತೊಡೆದು ಹಾಕಲು ಸಾಧ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ನಾಗೇಶ ಮೂರ್ತಿ ಬಿ ಕೆ ಹೇಳಿದರು.

ಪಟ್ಟಣದ ಡಾನ್ ಬಾಸ್ಕೊ ಶಾಲೆಯಲ್ಲಿ ತಾಲ್ಲೂಕು ಆಡಳಿತ, ಕಾರ್ಮಿಕ ಇಲಾಖೆ, ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರ, ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ಸಂಸ್ಥೆ, ಜಿಲ್ಲಾ ವಕೀಲರ ಸಂಘ ಹಾಗೂ ಕಟ್ಟಡ ಕಾರ್ಮಿಕರ ಸಂಘದ ಆಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 6 ರಿಂದ 18 ವರ್ಷದ ಮಕ್ಕಳು ಕಾರ್ಖಾನೆಗಳು, ಮಂಡಕ್ಕಿಭಟ್ಟಿ, ಇಟ್ಟಿಗೆಭಟ್ಟಿ, ಹೋಟೆಲ್, ಸಿನಿಮಾ ಥಿಯೇಟರ್ ಮುಂತಾದ ಕಡೆಗಳಲ್ಲಿ ಶಕ್ತಿ ಮೀರಿ ದುಡಿಯುತ್ತಿರುತ್ತಾರೆ. ಇದಕ್ಕೆ ಕಾನೂನಿನಲ್ಲಿ ಆಸ್ಪದವಿಲ್ಲ. ಬಾಲ ಕಾರ್ಮಿಕರು ಕೆಲಸ ಮಾಡು‌ತ್ತಿದ್ದರೆ ಅದನ್ನು ತಿಳಿಸುವುದು ಎಲ್ಲರ ಜವಾಬ್ದಾರಿ. ಆದರೆ ಯಾರೊಬ್ಬರು ಮಾಹಿತಿ ನೀಡದುರುವುದು ಬೇಸರದ ಸಂಗತಿ’ ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಆರ್ ಇಂದಿರಾ ಮಾತನಾಡಿದರು. ಸಿವಿಲ್ ನ್ಯಾಯಾಧೀಶ ಬಾಳ ಸಾಹೇಬ್ ವಡವಡೆ, ವಕೀಲ ಸಂಘದ ಅಧ್ಯಕ್ಷ ವೆಂಕಟೇಶ್ ಚೌಹಾಣ್, ತಹಶೀಲ್ದಾರ್ ಶ್ರೀ ನಿವಾಸ ಚಾಪೆಲ್, ಕಾರ್ಯದರ್ಶಿ ಶಿವಪ್ಪ, ಪುರಸಭೆ ಮುಖ್ಯಾಧಿಕಾರಿ ಸಾಬಣ್ಣ ಕಟ್ಟಿಕಾರ್, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ನಾಗರತ್ನ, , ಶಿವಲಿಂಗಪ್ಪ, ಸಿದ್ದಲಿಂಗಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT