ಸೋಮವಾರ, ಅಕ್ಟೋಬರ್ 18, 2021
27 °C
ವಿಶ್ವ ಪ್ರವಾಸೋದ್ಯಮ ದಿನಾಚರಣೆ: ಸೈಕ್ಲೋಥಾನ್ಗೆ ಚಾಲನೆ

ಸೈಕಲ್ ಸವಾರಿಯಿಂದ ಆರೋಗ್ಯ ವೃದ್ಧಿ: ಶಾಸಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಮನುಷ್ಯನ ದೈಹಿಕ ಆರೋಗ್ಯ ಹಾಗೂ ಪರಿಸರ ಸಮತೋಲನ ಕಾಪಾಡುವಲ್ಲಿ ಸೈಕಲ್ ಸವಾರಿ ಉತ್ತಮ ಎಂದು ಶಾಸಕ ಡಾ.ಶಿವರಾಜ ಪಾಟೀಲ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಸೋಮವಾರ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆ-2022ರ ಸೈಕ್ಲೋಥಾನ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಇಂದಿನ ದಿನಗಳಲ್ಲಿ ವಾತಾವರಣ ಬದಲಾವಣೆಯಿಂದಾಗಿ ಮಹಾಮಳೆ, ಚಂಡಮಾರುತ, ಸುನಾಮಿ ಮತ್ತು ಬರಗಾಲಗಳು ಸಂಭವಿಸಿ ಮಾನವನ ಜೀವನವನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿವೆ. ವಾತಾವರಣ ಸಮತೋಲನ ಮಾಡುವುದಕ್ಕೆ ಪ್ಲಾಸ್ಟಿಕ್ ಬಳಕೆ, ಹಾಗೂ ವಾಹನಗಳ ಬಳಕೆ ಕಡಿಮೆ ಮಾಡಬೇಕಾಗಿದೆ. ಪ್ರತಿಯೊಬ್ಬ ಅಧಿಕಾರಿಗಳು ಮತ್ತು ಸಿಬ್ಬಂದಿ ವಾರದಲ್ಲಿ ಒಂದು ದಿನ ಕಡ್ಡಾಯವಾಗಿ ಸೈಕಲ್ ಸವಾರಿ ಮಾಡುವುದನ್ನು ರೂಢಿಸಿಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಅವರು ಮಾತನಾಡಿ, ವಿಶ್ವ ಪ್ರವಾಸೋದ್ಯಮ ದಿನಾಚರಣೆ ಪ್ರಯುಕ್ತ ಜಿಲ್ಲೆಯಲ್ಲಿ ಪರಿಸರ ಉಳಿಸುವ ನಿಟ್ಟಿನಲ್ಲಿ ಪ್ಲಾಸ್ಟಿಕ್ ಬಳಕೆ ಮತ್ತು ಸಾಗಟ ಸಂಪೂರ್ಣವಾಗಿ ನಿಷೇಧ ಹೇರಲಾಗುತ್ತಿದೆ. ಪ್ರತಿಯೊಬ್ಬರೂ ಪ್ಲಾಸ್ಟಿಕ್ ಬಳಕೆ ಮಾಡಬಾರದು. ಸಿಟಿ ಅಭಿವೃದ್ಧಿಗಾಗಿ ಈಗಾಗಲೇ ಕ್ರಮ ಕೈಗೊಳ್ಳಲಾಗಿದ್ದು, ವಾಹನಗಳ ಬಳಕೆ ಕಡಿಮೆ ಮಾಡಬೇಕು. ಸೈಕಲ್ ಸವಾರಿ ಹೆಚ್ಚು ಮಾಡಬೇಕು. ಸೈಕಲ್ ಸವಾರಿ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗದೆ ವರ್ಷಪೂರ್ತಿ ಸೈಕಲ್ ಬಳಕೆ ಮಾಡಬೇಕು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್ ಮಾತನಾಡಿದರು.

ಶಾಸಕ ಬಸನಗೌಡ ದದ್ದಲ್, ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಸತೀಶ.ಕೆ.ಎಚ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗರಾಜ, ರಾಜ್ಯ ಪುರಾತತ್ವ ಇಲಾಖೆಯ ಅಧಿಕಾರಿ ಶಿವು ಪ್ರಕಾಶ್, ಪ್ರವಾಸೋದ್ಯಮ ಇಲಾಖೆಯ ಸಿಬ್ಬಂದಿ ಮಹಮದ್ ರಫೀ, ಕವಿತಾ, ಹನುಮಂತ ನಾಯಕ, ಸಂದೀಪ್ ರಜಪೂತ್ ಮತ್ತಿತರರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು