ಶುಕ್ರವಾರ, ಫೆಬ್ರವರಿ 3, 2023
16 °C

ಸಿರವಾರ: ಪಿಎಸ್​ಐ ಹೆಸರಿನಲ್ಲಿ ಡೆತ್​ನೋಟ್​ ಬರೆದಿಟ್ಟು ನಾಪತ್ತೆಯಾದ ಯುವಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿರವಾರ: ಪಟ್ಟಣದ ಪೊಲೀಸ್‌ ಠಾಣೆಯ ಮಹಿಳಾ ಪಿಎಸ್​ಐ ಗೀತಾಂಜಲಿ ಶಿಂಧೆ ಕಿರುಕುಳ ನೀಡುತ್ತಿದ್ದಾರೆ ಎಂದು ಆಪಾದಿಸಿ, ಡೆತ್​ನೋಟ್​ ಬರೆದಿಟ್ಟು ಯುವಕನೊಬ್ಬ ನಾಪತ್ತೆಯಾಗಿದ್ದಾನೆ.

ತಾಯಣ್ಣ ನೀಲಗಲ್ ನಾಪತ್ತೆಯಾದ ಯುವಕ. ’ಪಿಎಸ್​ಐ ಗೀತಾಂಜಲಿ ಶಿಂಧೆ ಅವರು ಮೂರು ತಿಂಗಳಿಂದ ವಿನಾಕಾರಣ ಠಾಣೆಗೆ ಕರೆಸಿ ನನಗೆ ಕಿರುಕುಳ ನೀಡುತ್ತಿದ್ದರು’ ಎಂದು ತಾಯಣ್ಣ ಆರೋಪ ಮಾಡಿದ್ದಾರೆ.

ಸಂಬಂಧಿಕರ ಜಮೀನಿನ ಭತ್ತ ಕಟಾವು ಮಾಡಿರುವ ಬಗ್ಗೆ ತಾಯಣ್ಣ ವಿರುದ್ಧ ದೂರು ದಾಖಲಿಸಲಾಗಿತ್ತು. ಈ ಕಾರಣಕ್ಕಾಗಿ ತಾಯಣ್ಣನನ್ನು ಡಿಸೆಂಬರ್‌ 2 ರಂದುಠಾಣೆಗೆ ಕರೆಸಿ, ಬಹಳ ಹೊತ್ತು ಲಾಕಪ್​ನಲ್ಲಿ ಕೂರಿಸಿದ್ದರು. ಇದರಿಂದ ಮನ‌ನೊಂದಿರುವುದಾಗಿ ಯುವಕ ತಿಳಿಸಿದ್ದಾನೆ.

ನಾಪತ್ತೆಯಾಗಿರುವ ತಾಯಣ್ಣನ ವಿರುದ್ಧ 4 ಕ್ರಿಮಿನಲ್ ಹಾಗೂ 5 ಸಿವಿಲ್ ಪ್ರಕರಣಗಳಿವೆ.

‘ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಇದಕ್ಕೆ ಪಿಎಸ್​ಐ ಗೀತಾಂಜಲಿ ಶಿಂಧೆ ಅವರೇ ಕಾರಣ. ನನಗೆ ನಿರಂತರ ಕಿರುಕುಳ ನೀಡುತ್ತಿದ್ದು, ದೌರ್ಜನ್ಯ ಎಸಗುತ್ತಿದ್ದಾರೆ. ಇದರಿಂದ ಭಯಭೀತನಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನಗೆ ಹೊರಗಡೆ ಹೋದಾಗಲೆಲ್ಲ ಜೀಪ್​ ನಿಲ್ಲಿಸಿ, ನನಗೆ ಹೊಡೆದಂತಹ ಅನೇಕ ಪ್ರಸಂಗಗಳು ಇವೆ. ಅದನ್ನು ಈವರೆಗೂ ನಾನು ಯಾರಿಗೂ ಹೇಳಿಕೊಂಡಿರಲಿಲ್ಲ. ಇದೀಗ ನಾನು ಬಹಳಷ್ಟು ನೊಂದಿದ್ದೇನೆ. ಹೀಗಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂದು ಪತ್ರದಲ್ಲಿ ಬರೆಯಲಾಗಿದೆ.

ಎರಡು ಪುಟಗಳ ಸುದೀರ್ಘ ಡೆತ್​ ನೋಟ್​ ಬರೆದಿರುವ ತಾಯಣ್ಣ ಅವರು  ಕೊನೆಯಲ್ಲಿ ನನ್ನ ಎಲ್ಲ ಕುಟುಂಬ ಸದಸ್ಯರನ್ನು ನಾನು ಮಿಸ್​ ಮಾಡಿಕೊಳ್ಳುತ್ತಿದ್ದೇನೆ. ಇದೇ ನನ್ನ ಕೊನೆಯ ಬರಹ ನೋಡಿಕೊಳ್ಳಿ. ಮಿಸ್​ ಯು ಅಮ್ಮ ಎಂದು ಬರೆದಿದ್ದಾರೆ. ಕುಟುಂಬದವರು ಆತಂಕದಿಂದ ಹುಡುಕಾಟ ಆರಂಭಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು